Luke · chapter 24 · verse 44
Luke 24:44 in Kannada
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
Aaga aatanu avarige--mosheya nyaaya pramaanadalliyoo pravaadanegalalliyoo keertane galalliyoo nannannu kuritaagi bareyalpattavu galellavu neraveruvadu agatyavaagide emba ee maatugalannu naanu nimmondige iddaagale heliddenu andanu.
Luke 24:44 in English
- King James Version (KJV)
- And he said unto them, These [are] the words which I spake unto you, while I was yet with you, that all things must be fulfilled, which were written in the law of Moses, and [in] the prophets, and [in] the psalms, concerning me.
- World English Bible (WEB)
- He said to them, “This is what I told you while I was still with you, that all things which are written in the law of Moses, the prophets, and the psalms concerning me must be fulfilled.”
- American Standard Version (ASV)
- And he said unto them, These are my words which I spake unto you, while I was yet with you, that all things must needs be fulfilled, which are written in the law of Moses, and the prophets, and the psalms, concerning me.
- Bible in Basic English (BBE)
- And he said to them, These are the words which I said to you when I was still with you, how it was necessary for all the things which are in the writings of Moses and the prophets and in the Psalms about me, to be put into effect.
- Darby Translation (DBY)
- And he said to them, These [are] the words which I spoke to you while I was yet with you, that all that is written concerning me in the law of Moses and prophets and psalms must be fulfilled.
- Webster's Bible (WBS)
- And he said to them, These [are] the words which I spoke to you, while I was yet with you, that all things must be fulfilled, which were written in the law of Moses, and [in] the prophets, and [in] the psalms, concerning me.
- Young's Literal Translation (YLT)
- and he said to them, 'These [are] the words that I spake unto you, being yet with you, that it behoveth to be fulfilled all the things that are written in the Law of Moses, and the Prophets, and the Psalms, about me.'
Read in context
- 42ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.
- 43ಆತನು ತಕ್ಕೊಂಡು ಅವರ ಮುಂದೆ ತಿಂದನು.
- 44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- 45ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
- 46ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
Cross references
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- Luke 24:26–27 ಲೂಕನು 24:26–27ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Psalm 110:1–7 ಕೀರ್ತನೆಗಳು 110:1–7ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ, ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು. ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು. ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು. ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು. ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು. ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
- Acts 13:33 ಅಪೊಸ್ತಲರ ಕೃತ್ಯಗಳು 13:33ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
- Isaiah 11:1–10 ಯೆಶಾಯ 11:1–10ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು. ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು. ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ. ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು. ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು. ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು. ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು. ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
- Luke 9:22 ಲೂಕನು 9:22ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
- Isaiah 7:14 ಯೆಶಾಯ 7:14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- Deuteronomy 18:15–19 ಧರ್ಮೋಪದೇಶಕಾಂಡ 18:15–19ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.-- ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ. ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ. ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು. ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
- Acts 3:22–24 ಅಪೊಸ್ತಲರ ಕೃತ್ಯಗಳು 3:22–24ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು; ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು. ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.
- Revelation 19:10 ಪ್ರಕಟನೆ 19:10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
- Isaiah 40:1–11 ಯೆಶಾಯ 40:1–11ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ. ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು. ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ. ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು. ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ. ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ. ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು. ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು. ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ. ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.