Luke · chapter 24 · verse 46
Luke 24:46 in Kannada
ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
Avarige--kristanu heege shramepattu sattavarolaginda mooraneya dinadalli eddu baruvadu agatyavaagittentaloo
Luke 24:46 in English
- King James Version (KJV)
- And said unto them, Thus it is written, and thus it behoved Christ to suffer, and to rise from the dead the third day:
- World English Bible (WEB)
- He said to them, “Thus it is written, and thus it was necessary for the Christ to suffer and to rise from the dead the third day,
- American Standard Version (ASV)
- and he said unto them, Thus it is written, that the Christ should suffer, and rise again from the dead the third day;
- Bible in Basic English (BBE)
- And he said to them, So it is in the Writings that the Christ would undergo death, and come back to life again on the third day;
- Darby Translation (DBY)
- and said to them, Thus it is written, and thus it behoved the Christ to suffer, and to rise from among the dead the third day;
- Webster's Bible (WBS)
- And said to them, Thus it is written, and thus it behooved Christ to suffer, and to rise from the dead the third day:
- Young's Literal Translation (YLT)
- and he said to them — 'Thus it hath been written, and thus it was behoving the Christ to suffer, and to rise out of the dead the third day,
Read in context
- 44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- 45ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
- 46ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
- 47ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
- 48ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ.
Cross references
- Isaiah 53:2–12 ಯೆಶಾಯ 53:2–12ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ. ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು. ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು. ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ. ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Isaiah 50:6 ಯೆಶಾಯ 50:6ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
- Luke 24:44 ಲೂಕನು 24:44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- Luke 24:26–27 ಲೂಕನು 24:26–27ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- Luke 24:7 ಲೂಕನು 24:7ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
- Acts 17:3 ಅಪೊಸ್ತಲರ ಕೃತ್ಯಗಳು 17:3ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
- Psalm 22:1–31 ಕೀರ್ತನೆಗಳು 22:1–31ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ. ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ. ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು. ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ. ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ. ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ. ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ-- ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ. ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ. ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ. ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ. ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ. ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ. ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ. ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ. ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ. ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು. ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು. ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ. ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ. ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು. ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು. ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು. ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು. ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ. ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು. ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು. ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
- 1 Peter 1:3 1 ಪೇತ್ರನು 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
- Acts 4:12 ಅಪೊಸ್ತಲರ ಕೃತ್ಯಗಳು 4:12ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.