Luke · chapter 24 · verse 49
Luke 24:49 in Kannada
ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
Igo, nanna tandeyu vaagdaana maadiddannu nimma mele kaluhisuvenu; aadare neevu melana shaktiyannu honduva varege yeroosalem pattanadalliye kaadukondirri andanu.
Luke 24:49 in English
- King James Version (KJV)
- And, behold, I send the promise of my Father upon you: but tarry ye in the city of Jerusalem, until ye be endued with power from on high.
- World English Bible (WEB)
- Behold, I send out the promise of my Father on you. But wait in the city of Jerusalem until you are clothed with power from on high.”
- American Standard Version (ASV)
- And behold, I send forth the promise of my Father upon you: but tarry ye in the city, until ye be clothed with power from on high.
- Bible in Basic English (BBE)
- And now I will send to you what my father has undertaken to give you, but do not go from the town, till the power from heaven comes to you.
- Darby Translation (DBY)
- And behold, I send the promise of my Father upon you; but do ye remain in the city till ye be clothed with power from on high.
- Webster's Bible (WBS)
- And behold, I send the promise of my Father upon you: but tarry ye in the city of Jerusalem, until ye are endued with power from on high.
- Young's Literal Translation (YLT)
- 'And, lo, I do send the promise of my Father upon you, but ye — abide ye in the city of Jerusalem till ye be clothed with power from on high.'
Read in context
- 47ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
- 48ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ.
- 49ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
- 50ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
- 51ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.
Cross references
- Acts 1:8 ಅಪೊಸ್ತಲರ ಕೃತ್ಯಗಳು 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- Acts 1:4 ಅಪೊಸ್ತಲರ ಕೃತ್ಯಗಳು 1:4ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.
- Joel 2:28–32 ಯೋವೇಲ 2:28–32ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು. ದಾಸರ ಮೇಲೆಯೂ ದಾಸಿಯರ ಮೇಲೆಯೂ ಆ ದಿವಸಗಳಲ್ಲಿ ನನ್ನ ಆತ್ಮವನ್ನು ಸುರಿಸುವೆನು. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು. ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು. ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- John 14:26 ಯೋಹಾನನು 14:26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
- Isaiah 32:15 ಯೆಶಾಯ 32:15ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
- Isaiah 44:3–4 ಯೆಶಾಯ 44:3–4ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು. ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿ ಯಾಗುವರು.
- John 14:16–17 ಯೋಹಾನನು 14:16–17ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು. ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.
- John 15:26 ಯೋಹಾನನು 15:26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- Acts 2:1–21 ಅಪೊಸ್ತಲರ ಕೃತ್ಯಗಳು 2:1–21ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು. ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು. ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು. ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು. ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ? ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ? ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು, ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು. ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು. ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ. ನೀವು ಭಾವಿಸಿದಂತೆ ಇವರು ಕುಡಿದು ಅಮಲೇರಿ ದವರಲ್ಲ; ಯಾಕಂದರೆ ಈಗ ಹಗಲು ಮೂರು (ಒಂಭತ್ತು) ಗಂಟೆಯಾಗಿದೆಯಷ್ಟೆ. ಆದರೆ ಇದು ಪ್ರವಾದಿಯಾದ ಯೋವೇಲನಿಂದ ಹೇಳಲ್ಪಟ್ಟದ್ದಾಗಿದೆ. ಅದೇನಂದರೆ-- ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ. ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು; ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು. ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು. ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
- Isaiah 59:20–21 ಯೆಶಾಯ 59:20–21ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ. ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- John 16:7–16 ಯೋಹಾನನು 16:7–16ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು. ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ; ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು. ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು. ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು. ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು.