Luke · chapter 24 · verse 6
Luke 24:6 in Kannada
ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--
Aatanu illilla, eddiddaane; aatanu innoo galilaaya dalliddaagale--
Luke 24:6 in English
- King James Version (KJV)
- He is not here, but is risen: remember how he spake unto you when he was yet in Galilee,
- World English Bible (WEB)
- He isn’t here, but is risen. Remember what he told you when he was still in Galilee,
- American Standard Version (ASV)
- He is not here, but is risen: remember how he spake unto you when he was yet in Galilee,
- Bible in Basic English (BBE)
- He is not here, he has come back to life: have in mind what he said to you when he was still in Galilee, saying,
- Darby Translation (DBY)
- He is not here, but is risen: remember how he spoke to you, being yet in Galilee,
- Webster's Bible (WBS)
- He is not here, but is risen. Remember how he spoke to you when he was yet in Galilee,
- Young's Literal Translation (YLT)
- he is not here, but was raised; remember how he spake to you, being yet in Galilee,
Read in context
- 4ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು.
- 5ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
- 6ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--
- 7ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
- 8ಆಗ ಅವರು ಆತನ ಮಾತುಗಳನ್ನು ನೆನಪು ಮಾಡಿಕೊಂಡು
Cross references
- Matthew 17:22–23 ಮತ್ತಾಯನು 17:22–23ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು. ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.
- Luke 9:22 ಲೂಕನು 9:22ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
- Mark 8:31 ಮಾರ್ಕನು 8:31ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
- Matthew 28:6 ಮತ್ತಾಯನು 28:6ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
- Luke 9:44 ಲೂಕನು 9:44ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
- Matthew 27:63 ಮತ್ತಾಯನು 27:63ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
- Mark 10:33–34 ಮಾರ್ಕನು 10:33–34ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು. ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
- Matthew 20:18–19 ಮತ್ತಾಯನು 20:18–19ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು. ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
- Mark 9:30–32 ಮಾರ್ಕನು 9:30–32ಅವರು ಅಲ್ಲಿಂದ ಹೊರಟು ಗಲಿಲಾಯವನ್ನು ಹಾದುಹೋಗುತ್ತಿದ್ದರು. ಇದು ಯಾರಿಗೂ ತಿಳಿಯಬಾರದೆಂದು ಆತನಿಗೆ ಮನಸ್ಸಿತ್ತು. ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು. ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.
- Matthew 16:21 ಮತ್ತಾಯನು 16:21ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
- Matthew 12:40 ಮತ್ತಾಯನು 12:40ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
- Luke 24:44–46 ಲೂಕನು 24:44–46ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು. ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು. ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ