Luke · chapter 5 · verse 27
Luke 5:27 in Kannada
ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
Ivugalaada mele aatanu munde hogi terigeya kacheriyalli kootukondidda leviya nemba hesarulla obba sunkadavanannu nodi avanige--nannannu himbaalisu andanu.
Luke 5:27 in English
- King James Version (KJV)
- And after these things he went forth, and saw a publican, named Levi, sitting at the receipt of custom: and he said unto him, Follow me.
- World English Bible (WEB)
- After these things he went out and saw a tax collector named Levi sitting at the tax office, and said to him, “Follow me!”
- American Standard Version (ASV)
- And after these things he went forth, and beheld a publican, named Levi, sitting at the place of toll, and said unto him, Follow me.
- Bible in Basic English (BBE)
- And after these things he went out, and saw Levi, a tax-farmer, seated at the place where taxes were taken, and said to him, Come after me.
- Darby Translation (DBY)
- And after these things he went forth and saw a tax-gatherer, Levi by name, sitting at the receipt of taxes, and said to him, Follow me.
- Webster's Bible (WBS)
- And after these things he went forth, and saw a publican named Levi, sitting at the receipt of custom: and he said to him, Follow me.
- Young's Literal Translation (YLT)
- And after these things he went forth, and beheld a tax-gatherer, by name Levi, sitting at the tax-office, and said to him, 'Be following me;'
Read in context
- 25ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ತನ್ನ ಸ್ವಂತ ಮನೆಗೆ ಹೊರಟುಹೋದನು.
- 26ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.
- 27ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
- 28ಅವನು ಎಲ್ಲವನ್ನು ಬಿಟ್ಟು ಎದ್ದು ಆತನನ್ನು ಹಿಂಬಾಲಿಸಿದನು.
- 29ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.
Cross references
- Mark 2:13–22 ಮಾರ್ಕನು 2:13–22ಆತನು ತಿರಿಗಿ ಸಮುದ್ರದ ಕಡೆಗೆ ಹೊರಟು ಹೋದನು; ಆಗ ಜನಸಮೂಹವೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಬೋಧಿಸಿದನು. ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು. ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು. ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು. ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು. ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ--ಮದಲಿಂಗನು ಅವರ ಸಂಗಡ ಇರುವಾಗ ಮದಲಗಿ ತ್ತಿಯ ಮನೇಮಕ್ಕಳು ಉಪವಾಸ ಮಾಡುವರೋ? ಮದಲಿಂಗನು ಅವರ ಸಂಗಡ ಇರುವ ತನಕ ಅವರು ಉಪವಾಸ ಮಾಡುವದಿಲ್ಲ. ಆದರೆ ಮದಲಿಂಗನು ಅವರ ಬಳಿಯಿಂದ ತೆಗೆಯಲ್ಪಡುವ ದಿವಸಗಳು ಬರುತ್ತವೆ; ಆಗ ಅವರು ಆ ದಿವಸಗಳಲ್ಲಿ ಉಪವಾಸ ಮಾಡುವರು. ಇದಲ್ಲದೆ ಹೊಸಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲ;ಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು. ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ
- Matthew 9:9–17 ಮತ್ತಾಯನು 9:9–17ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು. ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು. ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು. ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು. ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು. ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು. ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು. ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
- Mark 3:18 ಮಾರ್ಕನು 3:18ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
- Matthew 10:3 ಮತ್ತಾಯನು 10:3ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,
- John 1:43 ಯೋಹಾನನು 1:43ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
- Luke 18:22 ಲೂಕನು 18:22ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
- Matthew 4:19–21 ಮತ್ತಾಯನು 4:19–21ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು. ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
- Matthew 16:24 ಮತ್ತಾಯನು 16:24ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
- Matthew 8:22 ಮತ್ತಾಯನು 8:22ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
- John 12:26 ಯೋಹಾನನು 12:26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
- John 21:19–22 ಯೋಹಾನನು 21:19–22ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಊಟದಲ್ಲಿ ಆತನ ಎದೆಗೆ ಒರಗಿಕೊಂಡು-- ಕರ್ತನೇ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದಂಥ ಮತ್ತು ಯೇಸು ಪ್ರೀತಿಸಿದಂಥ ಶಿಷ್ಯನು ಹಿಂದೆ ಬರುವದನ್ನು ಪೇತ್ರನು ಹಿಂತಿರುಗಿ ನೋಡಿ ಯೇಸುವಿಗೆ--ಕರ್ತನೇ, ಈ ಮನುಷ್ಯನ ವಿಷಯವೇನು ಅಂದನು. 22ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು.
Original words (Greek)
- And · G2532καί kaí
- after · G3326μετά metá
- things · G5023ταῦτα taûta
- forth · G1831ἐξέρχομαι exérchomai
- and · G2532καί kaí
- saw · G2300θεάομαι theáomai
- publican · G5057τελώνης telṓnēs
- named · G3686ὄνομα ónoma
- Levi · G3018Λευΐς Leuḯs
- sitting · G2521κάθημαι káthēmai
- at · G1909ἐπί epí
- custom · G5058τελώνιον telṓnion
- and · G2532καί kaí
- said · G2036ἔπω épō
- him · G846αὐτός autós