Luke · chapter 5 · verse 32
Luke 5:32 in Kannada
ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
Naanu neetivantarannalla, aadare paapigalannu maanasaantarakke kareyuvadakkaagi bandenu endu helidanu.
Luke 5:32 in English
- King James Version (KJV)
- I came not to call the righteous, but sinners to repentance.
- World English Bible (WEB)
- I have not come to call the righteous, but sinners, to repentance.”
- American Standard Version (ASV)
- I am not come to call the righteous but sinners to repentance.
- Bible in Basic English (BBE)
- I have come, not to get the upright, but sinners, so that they may be turned from their sins.
- Darby Translation (DBY)
- I am not come to call righteous [persons], but sinful [ones] to repentance.
- Webster's Bible (WBS)
- I came not to call the righteous, but sinners to repentance.
- Young's Literal Translation (YLT)
- I came not to call righteous men, but sinners, to reformation.'
Read in context
- 30ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
- 31ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.
- 32ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
- 33ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
- 34ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ?
Cross references
- Luke 19:10 ಲೂಕನು 19:10ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
- Luke 15:10 ಲೂಕನು 15:10ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 1 Timothy 1:15–16 1 ತಿಮೊಥೆಯನಿಗೆ 1:15–16ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು. ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- Luke 15:7 ಲೂಕನು 15:7ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Acts 3:19 ಅಪೊಸ್ತಲರ ಕೃತ್ಯಗಳು 3:19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
- Luke 24:47 ಲೂಕನು 24:47ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
- Acts 17:30 ಅಪೊಸ್ತಲರ ಕೃತ್ಯಗಳು 17:30ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Luke 4:18–19 ಲೂಕನು 4:18–19ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
- 2 Peter 3:9 2 ಪೇತ್ರನು 3:9ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
- Luke 18:10–14 ಲೂಕನು 18:10–14ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು. ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು. ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು. ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 2 Timothy 2:25–26 2 ತಿಮೊಥೆಯನಿಗೆ 2:25–26ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು. ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.