Luke · chapter 5 · verse 34
Luke 5:34 in Kannada
ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ?
Aatanu avarige--madumaganu maduve maneya makkala joteyalli iruvaaga avarige upavaasa maadisuvante nimmindaadeete?
Luke 5:34 in English
- King James Version (KJV)
- And he said unto them, Can ye make the children of the bridechamber fast, while the bridegroom is with them?
- World English Bible (WEB)
- He said to them, “Can you make the friends of the bridegroom fast while the bridegroom is with them?
- American Standard Version (ASV)
- And Jesus said unto them, Can ye make the sons of the bride-chamber fast, while the bridegroom is with them?
- Bible in Basic English (BBE)
- And Jesus said, Are you able to make the friends of the newly-married man go without food when he is with them?
- Darby Translation (DBY)
- And he said to them, Can ye make the sons of the bridechamber fast when the bridegroom is with them?
- Webster's Bible (WBS)
- And he said to them, Can ye make the children of the bride-chamber fast, while the bridegroom is with them?
- Young's Literal Translation (YLT)
- And he said unto them, 'Are ye able to make the sons of the bride-chamber — in the bridegroom being with them — to fast?
Read in context
- 32ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
- 33ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
- 34ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ?
- 35ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು.
- 36ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ.
Cross references
- John 3:29 ಯೋಹಾನನು 3:29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
- Revelation 19:7–9 ಪ್ರಕಟನೆ 19:7–9ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು. ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ. ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
- Matthew 25:1–10 ಮತ್ತಾಯನು 25:1–10ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು. ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು. ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ, ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು. ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು. ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು; ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು. ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು. ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
- Song of Solomon 2:6–7 ಪರಮಗೀತೆ 2:6–7ಅವನ ಎಡಗೈ ನನ್ನ ತಲೆಯ ಕೆಳಗದೆ; ಅವನ ಬಲಗೈ ನನ್ನನ್ನು ಅಪ್ಪಿ ಕೊಳ್ಳುತ್ತದೆ. ಓ ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸಬೇಡಿರಿ, ಇಲ್ಲವೆ ನನ್ನ ಪ್ರಿಯನನ್ನು ಎಚ್ಚರಿಸಬೇಡಿರಿ ಎಂದು ದುಪ್ಪಿಗಳಿಂದಲೂ ಅಡವಿಯ ಜಿಂಕೆಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
- Zephaniah 3:17 ಚೆಫನ್ಯ 3:17ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Song of Solomon 5:8 ಪರಮಗೀತೆ 5:8ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
- Psalm 45:10–16 ಕೀರ್ತನೆಗಳು 45:10–16ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು. ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು. ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು. ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ. ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ. ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ತರಲ್ಪಡುತ್ತಾರೆ; ಅವರು ಅರಸನ ಅರಮನೆಯೊಳಗೆ ಪ್ರವೇಶಿಸುವರು. ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
- Ephesians 5:25–27 ಎಫೆಸದವರಿಗೆ 5:25–27ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- Isaiah 62:5 ಯೆಶಾಯ 62:5ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
- 2 Corinthians 11:2 2 ಕೊರಿಂಥದವರಿಗೆ 11:2ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
- Song of Solomon 3:10–11 ಪರಮಗೀತೆ 3:10–11ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಕೆಳಗಿನ ಭಾಗವನ್ನು ಬಂಗಾರದಿಂದಲೂ ಹೊದಿಕೆ ಯನ್ನು ಧೂಮ್ರ ವರ್ಣದ ವಸ್ತ್ರದಿಂದಲೂ ಮಾಡಿ ಸಿದನು. ಯೆರೂಸಲೇಮಿನ ಕುಮಾರ್ತೆಯರ ನಿಮಿತ್ತ ಅದರ ಮಧ್ಯದಲ್ಲಿದ್ದದ್ದು ಪ್ರೀತಿಯಿಂದ ಹಾಸಲ್ಪಟ್ಟಿತು.ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ. ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.
- Song of Solomon 6:1 ಪರಮಗೀತೆ 6:1ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವ ಹಾಗೆ ನಿನ್ನ ಪ್ರಿಯನು ಯಾವ ಕಡೆಗೆ ತಿರುಗಿದ್ದಾನೆ?