Luke · chapter 5 · verse 6
Luke 5:6 in Kannada
ಅವರು ಅದರಂತೆ ಮಾಡಿ ವಿಾನಿನ ದೊಡ್ಡ ರಾಶಿಯನ್ನು ಹಿಡಿದರು. ಅವರ ಬಲೆಯು ಹರಿಯಿತು.
Avaru adarante maadi viాnina dodda raashiyannu hididaru. Avara baleyu hariyitu.
Luke 5:6 in English
- King James Version (KJV)
- And when they had this done, they inclosed a great multitude of fishes: and their net brake.
- World English Bible (WEB)
- When they had done this, they caught a great multitude of fish, and their net was breaking.
- American Standard Version (ASV)
- And when they had done this, they inclosed a great multitude of fishes; and their nets were breaking;
- Bible in Basic English (BBE)
- And when they had done this, they got such a great number of fish that it seemed as if their nets would be broken;
- Darby Translation (DBY)
- And having done this, they enclosed a great multitude of fishes. And their net broke.
- Webster's Bible (WBS)
- And when they had done this, they inclosed a great multitude of fishes: and their net broke.
- Young's Literal Translation (YLT)
- And having done this, they enclosed a great multitude of fishes, and their net was breaking,
Read in context
- 4ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು.
- 5ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು.
- 6ಅವರು ಅದರಂತೆ ಮಾಡಿ ವಿಾನಿನ ದೊಡ್ಡ ರಾಶಿಯನ್ನು ಹಿಡಿದರು. ಅವರ ಬಲೆಯು ಹರಿಯಿತು.
- 7ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು.
- 8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
Cross references
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- John 21:6–11 ಯೋಹಾನನು 21:6–11ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು. ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು). ಉಳಿದ ಶಿಷ್ಯರು ವಿಾನುಗಳಿದ್ದ ಬಲೆಯನ್ನು ಎಳೆಯುತ್ತಾ ಒಂದು ಚಿಕ್ಕ ದೋಣಿಯಲ್ಲಿ ಬಂದರು; (ಯಾಕಂದರೆ ಅವರು ದಡದಿಂದ ದೂರವಿರಲಿಲ್ಲ; ಆದರೆ ಅದು ಇನ್ನೂರು ಮೊಳ ದಷ್ಟಿತ್ತು). ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು. ಯೇಸು ಅವರಿಗೆ--ನೀವು ಈಗ ಹಿಡಿದ ವಿಾನುಗಳಲ್ಲಿ ಕೆಲ ವನ್ನು ತನ್ನಿರಿ ಅಂದನು. ಸೀಮೋನ ಪೇತ್ರನು ಹೋಗಿ ನೂರೈವತ್ತು ಮೂರು ದೊಡ್ಡ ವಿಾನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ವಿಾನು ಗಳಿದ್ದರೂ ಬಲೆಯು ಹರಿದಿರಲಿಲ್ಲ.
- Ecclesiastes 11:6 ಪ್ರಸಂಗಿ 11:6ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
- 2 Kings 4:3–7 2 ಅರಸುಗಳು 4:3–7ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ. ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು. ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು. ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು. ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.
- Galatians 6:9 ಗಲಾತ್ಯದವರಿಗೆ 6:9ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.