Luke · chapter 6 · verse 22
Luke 6:22 in Kannada
ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
Manushyakumaarana nimitta janaru nimmannu hagemaadi nimmannu bahishkarisi nindisi nimma hesarannu kettaddendu tegeduhaakidare neevu dhanyaru.
Luke 6:22 in English
- King James Version (KJV)
- Blessed are ye, when men shall hate you, and when they shall separate you [from their company], and shall reproach [you], and cast out your name as evil, for the Son of man’s sake.
- World English Bible (WEB)
- Blessed are you when men hate you, and when they exclude and mock you, and throw out your name as evil, for the Son of Man’s sake.
- American Standard Version (ASV)
- Blessed are ye, when men shall hate you, and when they shall separate you [from their company], and reproach you, and cast out your name as evil, for the Son of man’s sake.
- Bible in Basic English (BBE)
- Happy are you, when men have hate for you, and put you away from among them and say angry words to you, turning away in disgust at your name, because of the Son of man.
- Darby Translation (DBY)
- Blessed are ye when men shall hate you, and when they shall separate you [from them], and shall reproach [you], and cast out your name as wicked, for the Son of man's sake:
- Webster's Bible (WBS)
- Blessed are ye when men shall hate you, and when they shall separate you [from their company] , and shall reproach [you] , and cast out your name as evil, on account of the son of man.
- Young's Literal Translation (YLT)
- 'Happy are ye when men shall hate you, and when they shall separate you, and shall reproach, and shall cast forth your name as evil, for the Son of Man's sake —
Read in context
- 20ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
- 21ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
- 22ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
- 23ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
- 24ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ.
Cross references
- Matthew 5:10–12 ಮತ್ತಾಯನು 5:10–12ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು. ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು. ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- Matthew 10:22 ಮತ್ತಾಯನು 10:22ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
- 1 Peter 4:12–16 1 ಪೇತ್ರನು 4:12–16ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ. ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ. ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ. ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು. ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
- 1 Peter 3:14 1 ಪೇತ್ರನು 3:14ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
- 1 Thessalonians 2:14–15 1 ಥೆಸಲೊನೀಕದವರಿಗೆ 2:14–15ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ. ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
- Isaiah 66:5 ಯೆಶಾಯ 66:5ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
- John 16:2 ಯೋಹಾನನು 16:2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
- Philippians 1:28–30 ಫಿಲಿಪ್ಪಿಯವರಿಗೆ 1:28–30ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ. ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು. ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
- John 7:7 ಯೋಹಾನನು 7:7ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
- 2 Timothy 3:11–12 2 ತಿಮೊಥೆಯನಿಗೆ 3:11–12ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು. ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
- John 12:42 ಯೋಹಾನನು 12:42ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
- Acts 24:5 ಅಪೊಸ್ತಲರ ಕೃತ್ಯಗಳು 24:5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.