Luke · chapter 6 · verse 25
Luke 6:25 in Kannada
ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
Truptiyindiruvavare, nimage ayyo! Yaakandare nimage hasiveyaaguvadu. Eega naguvavare, nimage ayyo! Neevu shokisi aluviri.
Luke 6:25 in English
- King James Version (KJV)
- Woe unto you that are full! for ye shall hunger. Woe unto you that laugh now! for ye shall mourn and weep.
- World English Bible (WEB)
- Woe to you, you who are full now, for you will be hungry. Woe to you who laugh now, for you will mourn and weep.
- American Standard Version (ASV)
- Woe unto you, ye that are full now! for ye shall hunger. Woe [unto you], ye that laugh now! for ye shall mourn and weep.
- Bible in Basic English (BBE)
- Unhappy are you who are full of food now: for you will be in need. Unhappy are you who are laughing now: for you will be crying in sorrow.
- Darby Translation (DBY)
- Woe to you that are filled, for ye shall hunger. Woe to you who laugh now, for ye shall mourn and weep.
- Webster's Bible (WBS)
- Woe to you that are full! for ye shall hunger. Woe to you that laugh now! for ye shall mourn and weep.
- Young's Literal Translation (YLT)
- 'Woe to you who have been filled — because ye shall hunger. 'Woe to you who are laughing now — because ye shall mourn and weep.
Read in context
- 23ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
- 24ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ.
- 25ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
- 26ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
- 27ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
Cross references
- Isaiah 65:13 ಯೆಶಾಯ 65:13ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;
- James 4:9 ಯಾಕೋಬನು 4:9ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.
- Proverbs 14:13 ಜ್ಞಾನೋಕ್ತಿಗಳು 14:13ನಗೆಯಲ್ಲಿಯೂ ಹೃದಯವು ದುಃಖದಿಂದ ಇರು ವದು; ಅದರ ಉಲ್ಲಾಸದ ಅಂತ್ಯವು ವ್ಯಾಕುಲವೇ.
- Luke 16:14–15 ಲೂಕನು 16:14–15ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು. ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
- Amos 8:10 ಆಮೋಸ 8:10ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
- Job 20:5–7 ಯೋಬನು 20:5–7ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ. ಅವನ ಮಹತ್ತು ಆಕಾಶಕ್ಕೆ ಏರಿದರೂ ಅವನ ತಲೆ ಮೇಘಕ್ಕೆ ಮುಟ್ಟಿದರೂ ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು.
- Revelation 3:17 ಪ್ರಕಟನೆ 3:17ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
- Luke 8:53 ಲೂಕನು 8:53ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Revelation 18:7–11 ಪ್ರಕಟನೆ 18:7–11ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ. ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು. ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ
- Philippians 4:12–13 ಫಿಲಿಪ್ಪಿಯವರಿಗೆ 4:12–13ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ. ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- Luke 12:20 ಲೂಕನು 12:20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.