Luke · chapter 6 · verse 26
Luke 6:26 in Kannada
ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
Ellaa janaru nimma vishayadalli olledaagi maatanaadidare nimage ayyo! Avara pitrugalu sullu pravaadigalige haageye maadidaru.
Luke 6:26 in English
- King James Version (KJV)
- Woe unto you, when all men shall speak well of you! for so did their fathers to the false prophets.
- World English Bible (WEB)
- Woe, when men speak well of you, for their fathers did the same thing to the false prophets.
- American Standard Version (ASV)
- Woe [unto you], when all men shall speak well of you! for in the same manner did their fathers to the false prophets.
- Bible in Basic English (BBE)
- Unhappy are you when all men give you their approval: for so their fathers did to the false prophets.
- Darby Translation (DBY)
- Woe, when all men speak well of you, for after this manner did their fathers to the false prophets.
- Webster's Bible (WBS)
- Woe to you, when all men shall speak well of you! for so did their fathers to the false prophets.
- Young's Literal Translation (YLT)
- 'Woe to you when all men shall speak well of you — for according to these things were their fathers doing to false prophets.
Read in context
- 24ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ.
- 25ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
- 26ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
- 27ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
- 28ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
Cross references
- John 15:19 ಯೋಹಾನನು 15:19ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
- James 4:4 ಯಾಕೋಬನು 4:4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
- Matthew 7:15 ಮತ್ತಾಯನು 7:15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- 1 John 4:5–6 1 ಯೋಹಾನನು 4:5–6ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ. ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.
- Micah 2:11 ಮೀಕ 2:11ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
- Isaiah 30:10 ಯೆಶಾಯ 30:10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
- 2 Peter 2:1–3 2 ಪೇತ್ರನು 2:1–3ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- 2 Peter 2:18–19 2 ಪೇತ್ರನು 2:18–19ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- 2 Thessalonians 2:8–12 2 ಥೆಸಲೊನೀಕದವರಿಗೆ 2:8–12ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು. ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- John 7:7 ಯೋಹಾನನು 7:7ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.