Luke · chapter 6 · verse 31
Luke 6:31 in Kannada
ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ.
Janaru nimage enu maadabekendu neevu korutteero neevu saha avarige ada ranteye maadiri.
Luke 6:31 in English
- King James Version (KJV)
- And as ye would that men should do to you, do ye also to them likewise.
- World English Bible (WEB)
- “As you would like people to do to you, do exactly so to them.
- American Standard Version (ASV)
- And as ye would that men should do to you, do ye also to them likewise.
- Bible in Basic English (BBE)
- Do to others as you would have them do to you.
- Darby Translation (DBY)
- And as ye wish that men should do to you, do ye also to them in like manner.
- Webster's Bible (WBS)
- And as ye would that men should do to you, do ye also to them likewise.
- Young's Literal Translation (YLT)
- and as ye wish that men may do to you, do ye also to them in like manner;
Read in context
- 29ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
- 30ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
- 31ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ.
- 32ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.
- 33ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ.
Cross references
- Matthew 7:12 ಮತ್ತಾಯನು 7:12ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
- Galatians 5:14 ಗಲಾತ್ಯದವರಿಗೆ 5:14ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
- Matthew 22:39 ಮತ್ತಾಯನು 22:39ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
- James 2:8–16 ಯಾಕೋಬನು 2:8–16ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ. ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ. ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ. ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ. ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ. ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ. ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ? ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?