Luke · chapter 6 · verse 34
Luke 6:34 in Kannada
ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.
Yaarinda tirigi padakollabekendu nireekshisuttiro anthavarige saalakottare nimagenu hogalike bandeetu? Yaakandare paapigalu saha haageye taavu kottashtu tirigi padeyuvante paapigalige saala koduttaare.
Luke 6:34 in English
- King James Version (KJV)
- And if ye lend [to them] of whom ye hope to receive, what thank have ye? for sinners also lend to sinners, to receive as much again.
- World English Bible (WEB)
- If you lend to those from whom you hope to receive, what credit is that to you? Even sinners lend to sinners, to receive back as much.
- American Standard Version (ASV)
- And if ye lend to them of whom ye hope to receive, what thank have ye? even sinners lend to sinners, to receive again as much.
- Bible in Basic English (BBE)
- And if you let those have the use of your money, from whom you are hoping to get it back, what credit is it to you? even sinners do so to sinners, hoping to get back as much as they gave.
- Darby Translation (DBY)
- And if ye lend to those from whom ye hope to receive, what thank is it to you? [for] even sinners lend to sinners that they may receive the like.
- Webster's Bible (WBS)
- And if ye lend [to them] from whom ye hope to receive, what thanks have ye? for sinners also lend to sinners, to receive as much in return.
- Young's Literal Translation (YLT)
- and if ye lend [to those] of whom ye hope to receive back, what grace have ye? for also the sinful lend to sinners — that they may receive again as much.
Read in context
- 32ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.
- 33ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ.
- 34ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.
- 35ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
- 36ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.
Cross references
- Matthew 5:42 ಮತ್ತಾಯನು 5:42ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ.
- Luke 14:12–14 ಲೂಕನು 14:12–14ಆತನು ತನ್ನನ್ನು ಕರೆದವನಿಗೆ ಸಹ ಹೇಳಿದ್ದೇ ನಂದರೆ--ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ಸಾಯಂಕಾಲದ ಊಟಕ್ಕೆ ಸಿದ್ಧಪಡಿಸಿದಾಗ ನಿನ್ನ ಸ್ನೇಹಿತರನ್ನಾಗಲೀ ನಿನ್ನ ಸಹೋದರರನ್ನಾಗಲೀ ನಿನ್ನ ಬಂಧುಗಳನ್ನಾಗಲೀ ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲೀ ಕರೆಯಬೇಡ; ಯಾಕಂದರೆ ಅ ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ; ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
- Luke 6:35 ಲೂಕನು 6:35ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
- Deuteronomy 15:8–11 ಧರ್ಮೋಪದೇಶಕಾಂಡ 15:8–11ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು. ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ. ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು. ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.