Luke · chapter 6 · verse 39
Luke 6:39 in Kannada
ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?
Aatanu ondu saamyavannu avarige heli danu--kurudanu kurudanannu nadisaballano? (nadisidare) avaribbaroo kuniyalli beeluvadi llavo?
Luke 6:39 in English
- King James Version (KJV)
- And he spake a parable unto them, Can the blind lead the blind? shall they not both fall into the ditch?
- World English Bible (WEB)
- He spoke a parable to them. “Can the blind guide the blind? Won’t they both fall into a pit?
- American Standard Version (ASV)
- And he spake also a parable unto them, Can the blind guide the blind? shall they not both fall into a pit?
- Bible in Basic English (BBE)
- And he gave them teaching in the form of a story, saying, Is it possible for one blind man to be guide to another? will they not go falling together into a hole?
- Darby Translation (DBY)
- And he spoke also a parable to them: Can a blind [man] lead a blind [man]? shall not both fall into [the] ditch?
- Webster's Bible (WBS)
- And he spoke a parable to them; Can the blind lead the blind? will they not both fall into the ditch?
- Young's Literal Translation (YLT)
- And he spake a simile to them, 'Is blind able to lead blind? shall they not both fall into a pit?
Read in context
- 37ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.
- 38ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
- 39ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?
- 40ತನ್ನ ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನು.
- 41ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?
Cross references
- Matthew 15:14 ಮತ್ತಾಯನು 15:14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- 2 Timothy 3:13 2 ತಿಮೊಥೆಯನಿಗೆ 3:13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
- Isaiah 9:16 ಯೆಶಾಯ 9:16ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ.
- 1 Timothy 6:3–5 1 ತಿಮೊಥೆಯನಿಗೆ 6:3–5ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ. ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
- Matthew 23:16–26 ಮತ್ತಾಯನು 23:16–26ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ? ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ. ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ. ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.
- Jeremiah 14:15–16 ಯೆರೆಮೀಯ 14:15–16ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ. ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.
- Zechariah 11:15–17 ಜೆಕರ್ಯ 11:15–17ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ. ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು. ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
- Jeremiah 8:12 ಯೆರೆಮೀಯ 8:12ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
- Isaiah 56:10 ಯೆಶಾಯ 56:10ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
- Jeremiah 6:15 ಯೆರೆಮೀಯ 6:15ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
- Matthew 23:33 ಮತ್ತಾಯನು 23:33ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
- Romans 2:19 ರೋಮಾಪುರದವರಿಗೆ 2:19ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ