Luke · chapter 6 · verse 42
Luke 6:42 in Kannada
ಇಲ್ಲವೆ ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ--ಸಹೋದರನೇ, ನಿನ್ನ ಕಣ್ಣಿನಲ್ಲಿ ರುವ ರವೆಯನ್ನು ತೆಗೆಯುವೆನೆಂದು ನೀನು ಹೇಗೆ ಹೇಳುವದು? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು; ಆಮೇಲೆ ನಿನ್ನ ಸಹೊ
Illave ninna svanta kanninalliruva toleyannu neenu nodade ninna sahodaranige--sahodarane, ninna kanninalli ruva raveyannu tegeyuvenendu neenu hege heluvadu? Kapatiye, modalu ninna svanta kanninalliruva toleyannu tegeduhaaku; aamele ninna saho
Luke 6:42 in English
- King James Version (KJV)
- Either how canst thou say to thy brother, Brother, let me pull out the mote that is in thine eye, when thou thyself beholdest not the beam that is in thine own eye? Thou hypocrite, cast out first the beam out of thine own eye, and then shalt thou see clearly to pull out the mote that is in thy brother’s eye.
- World English Bible (WEB)
- Or how can you tell your brother, ‘Brother, let me remove the speck of chaff that is in your eye,’ when you yourself don’t see the beam that is in your own eye? You hypocrite! First remove the beam from your own eye, and then you can see clearly to remove the speck of chaff that is in your brother’s eye.
- American Standard Version (ASV)
- Or how canst thou say to thy brother, Brother, let me cast out the mote that is in thine eye, when thou thyself beholdest not the beam that is in thine own eye? Thou hypocrite, cast out first the beam out of thine own eye, and then shalt thou see clearly to cast out the mote that is in thy brother’s eye.
- Bible in Basic English (BBE)
- How will you say to your brother, Brother, let me take the grain of dust out of your eye, when you yourself do not see the bit of wood in your eye? O false one! first take the wood out of your eye and then you will see clearly to take the dust out of your brother's eye.
- Darby Translation (DBY)
- or how canst thou say to thy brother, Brother, allow [me], I will cast out the mote that is in thine eye, thyself not seeing the beam that is in thine eye? Hypocrite, cast out first the beam out of thine eye, and then thou shalt see clear to cast out the mote which is in the eye of thy brother.
- Webster's Bible (WBS)
- Either how canst thou say to thy brother, Brother, let me pull out the mote that is in thy eye, when thou thyself beholdest not the beam that is in thy own eye? Thou hypocrite, cast out first the beam out of thy own eye, and then shalt thou see clearly to pull out the mote that is in thy brother's eye.
- Young's Literal Translation (YLT)
- or how art thou able to say to thy brother, Brother, suffer, I may take out the mote that [is] in thine eye — thyself the beam in thine own eye not beholding? Hypocrite, take first the beam out of thine own eye, and then thou shalt see clearly to take out the mote that [is] in thy brother's eye.
Read in context
- 40ತನ್ನ ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನು.
- 41ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?
- 42ಇಲ್ಲವೆ ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ--ಸಹೋದರನೇ, ನಿನ್ನ ಕಣ್ಣಿನಲ್ಲಿ ರುವ ರವೆಯನ್ನು ತೆಗೆಯುವೆನೆಂದು ನೀನು ಹೇಗೆ ಹೇಳುವದು? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು; ಆಮೇಲೆ ನಿನ್ನ ಸಹೊ
- 43ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ.
- 44ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.
Cross references
- Romans 2:21–29 ರೋಮಾಪುರದವರಿಗೆ 2:21–29ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ? ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ? ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ? ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ. ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ. ಆದದರಿಂದ ಸುನ್ನತಿಯಿಲ್ಲದವನು ನ್ಯಾಯ ಪ್ರಮಾಣದ ನೀತಿಯನ್ನು ಕೈಕೊಂಡರೆ ಸುನ್ನತಿಯಿಲ್ಲದವನಾದ ಅವನಿಗೆ ಅದು ಸುನ್ನತಿಯೆಂದು ಎಣಿಸಲ್ಪಡುವದಿಲ್ಲವೋ? ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ? ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು. ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- 1 Thessalonians 2:10–12 1 ಥೆಸಲೊನೀಕದವರಿಗೆ 2:10–12ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ. ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು. ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
- Psalm 51:9–13 ಕೀರ್ತನೆಗಳು 51:9–13ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು. ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು. ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ. ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು. ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು.
- 2 Timothy 2:21 2 ತಿಮೊಥೆಯನಿಗೆ 2:21ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
- Revelation 3:17–18 ಪ್ರಕಟನೆ 3:17–18ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ. ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
- Matthew 23:13–15 ಮತ್ತಾಯನು 23:13–15ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ. ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
- Luke 13:15 ಲೂಕನು 13:15ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?
- Acts 9:9–20 ಅಪೊಸ್ತಲರ ಕೃತ್ಯಗಳು 9:9–20ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು. ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ. ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು. ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ; ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು. ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ. ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು. ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು. ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು. ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು. ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
- 2 Corinthians 5:18 2 ಕೊರಿಂಥದವರಿಗೆ 5:18ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- Luke 22:32 ಲೂಕನು 22:32ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- Matthew 26:75 ಮತ್ತಾಯನು 26:75ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.