Luke · chapter 6 · verse 46
Luke 6:46 in Kannada
ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
Nannannu neevu--kartane, kartane endu karedu naanu heluvavugalannu neevu maadade iruvadu yaake?
Luke 6:46 in English
- King James Version (KJV)
- And why call ye me, Lord, Lord, and do not the things which I say?
- World English Bible (WEB)
- “Why do you call me, ‘Lord, Lord,’ and don’t do the things which I say?
- American Standard Version (ASV)
- And why call ye me, Lord, Lord, and do not the things which I say?
- Bible in Basic English (BBE)
- Why do you say to me, Lord, Lord, and do not the things which I say?
- Darby Translation (DBY)
- And why call ye me, Lord, Lord, and do not the things that I say?
- Webster's Bible (WBS)
- And why call ye me Lord, Lord, and do not the things which I say?
- Young's Literal Translation (YLT)
- 'And why do ye call me, Lord, Lord, and do not what I say?
Read in context
- 44ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.
- 45ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
- 46ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
- 47ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.
- 48ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
Cross references
- Matthew 7:21–23 ಮತ್ತಾಯನು 7:21–23ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು. ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- Galatians 6:7 ಗಲಾತ್ಯದವರಿಗೆ 6:7ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
- Malachi 1:6 ಮಲಾಕಿಯ 1:6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
- Luke 13:25–27 ಲೂಕನು 13:25–27ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು. ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ. ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.
- Matthew 25:44 ಮತ್ತಾಯನು 25:44ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
- John 13:13–17 ಯೋಹಾನನು 13:13–17ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು. ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು. ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ. ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
- Matthew 25:24 ಮತ್ತಾಯನು 25:24ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
- Matthew 25:11 ಮತ್ತಾಯನು 25:11ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.