Luke · chapter 7 · verse 18
Luke 7:18 in Kannada
ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು.
Yohaanana shishyaru ee ellaa vishayagalannu avanige tiliyapadisidaru.
Luke 7:18 in English
- King James Version (KJV)
- And the disciples of John shewed him of all these things.
- World English Bible (WEB)
- The disciples of John told him about all these things.
- American Standard Version (ASV)
- And the disciples of John told him of all these things.
- Bible in Basic English (BBE)
- And the disciples of John gave him an account of all these things.
- Darby Translation (DBY)
- And the disciples of John brought him word concerning all these things:
- Webster's Bible (WBS)
- And the disciples of John informed him of all these things.
- Young's Literal Translation (YLT)
- And the disciples of John told him about all these things,
Read in context
- 16ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
- 17ಆತನ ವಿಷಯವಾದ ಈ ಸುದ್ದಿಯು ಎಲ್ಲಾ ಯೂದಾಯಕ್ಕೂ ಸುತ್ತಲಿರುವ ಎಲ್ಲಾ ಪ್ರಾಂತ್ಯಕ್ಕೂ ಹೊರಟು ಹೋಯಿತು.
- 18ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು.
- 19ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು.
- 20ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.
Cross references
- John 3:26 ಯೋಹಾನನು 3:26ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
- Matthew 11:2–19 ಮತ್ತಾಯನು 11:2–19ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ-- ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು. ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ; ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ. ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು. ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ? ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ. ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ. ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ. ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ. ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು. ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ. ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ-- ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ. ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ. ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ