Luke · chapter 7 · verse 22
Luke 7:22 in Kannada
ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
Taru vaaya yesu pratyuttaravaagi avarige--kuru daru noduttaare, kuntaru nadeyuttaare, kushtha rogigalu shuddharaaguttaare, kivudaru keluttaare, sattavaru ebbisalpaduttaare, badavarige suvaarteyu saaralpaduttade endu neevu kandu kelida ivu galannu
Luke 7:22 in English
- King James Version (KJV)
- Then Jesus answering said unto them, Go your way, and tell John what things ye have seen and heard; how that the blind see, the lame walk, the lepers are cleansed, the deaf hear, the dead are raised, to the poor the gospel is preached.
- World English Bible (WEB)
- Jesus answered them, “Go and tell John the things which you have seen and heard: that the blind receive their sight, the lame walk, the lepers are cleansed, the deaf hear, the dead are raised up, and the poor have good news preached to them.
- American Standard Version (ASV)
- And he answered and said unto them, Go and tell John the things which ye have seen and heard; the blind receive their sight, the lame walk, the lepers are cleansed, and the deaf hear, the dead are raised up, the poor have good tidings preached to them.
- Bible in Basic English (BBE)
- And answering them he said, Go back and give news to John of what you have seen, and the things which have come to your ears; the blind now see, those who had no power in their legs are walking, lepers are made clean, those who had no hearing now have their ears open, dead men come to life again, and the poor have the good news given to them.
- Darby Translation (DBY)
- And Jesus answering said to them, Go, bring back word to John of what ye have seen and heard: that blind see, lame walk, lepers are cleansed, deaf hear, dead are raised, poor are evangelized;
- Webster's Bible (WBS)
- Then Jesus answering, said to them, Go, and tell John what things ye have seen and heard; that the blind see, the lame walk, lepers are cleansed, the deaf hear, the dead are raised, to the poor the gospel is preached.
- Young's Literal Translation (YLT)
- And Jesus answering said to them, 'Having gone on, report to John what ye saw and heard, that blind men do see again, lame do walk, lepers are cleansed, deaf do hear, dead are raised, poor have good news proclaimed;
Read in context
- 20ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.
- 21ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.
- 22ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
- 23ನನ್ನ ವಿಷಯದಲ್ಲಿ ಸಂದೇಹಪಡದವನೇ ಧನ್ಯನು ಅಂದನು.
- 24ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
Cross references
- Isaiah 35:5–6 ಯೆಶಾಯ 35:5–6ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು. ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- Isaiah 61:1–3 ಯೆಶಾಯ 61:1–3ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Luke 4:18 ಲೂಕನು 4:18ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
- Isaiah 29:18–19 ಯೆಶಾಯ 29:18–19ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು. ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Acts 14:8–10 ಅಪೊಸ್ತಲರ ಕೃತ್ಯಗಳು 14:8–10ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು. ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು-- ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.
- Luke 7:14–15 ಲೂಕನು 7:14–15ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು. ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
- Matthew 9:28–30 ಮತ್ತಾಯನು 9:28–30ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು. ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- Matthew 21:14 ಮತ್ತಾಯನು 21:14ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
- Matthew 15:30–31 ಮತ್ತಾಯನು 15:30–31ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು. ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
- Luke 8:53–55 ಲೂಕನು 8:53–55ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು. ಆಗ ಆಕೆಯು ಬದುಕಿ ಕೂಡಲೆ ಎದ್ದಳು; ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನು.ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.