Luke · chapter 7 · verse 5
Luke 7:5 in Kannada
ಅವನು ನಮ್ಮ ಜನಾಂಗವನ್ನು ಪ್ರೀತಿಸುವದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ ಎಂದು ಬೇಡಿಕೊಂಡರು.
Avanu namma janaangavannu preetisuvadallade namagaagi ondu sabhaamandiravannu kattisiddaane endu bedikondaru.
Luke 7:5 in English
- King James Version (KJV)
- For he loveth our nation, and he hath built us a synagogue.
- World English Bible (WEB)
- for he loves our nation, and he built our synagogue for us.”
- American Standard Version (ASV)
- for he loveth our nation, and himself built us our synagogue.
- Bible in Basic English (BBE)
- It is right for you to do this for him, because he is a friend to our nation, and himself has put up a Synagogue for us.
- Darby Translation (DBY)
- for he loves our nation, and himself has built the synagogue for us.
- Webster's Bible (WBS)
- For he loveth our nation, and he hath built us a synagogue.
- Young's Literal Translation (YLT)
- for he doth love our nation, and the synagogue he did build to us.'
Read in context
- 3ಅವನು ಯೇಸುವಿನ ವಿಷಯ ಕೇಳಿದಾಗ ಆತನು ಬಂದು ತನ್ನ ಆಳನ್ನು ಗುಣ ಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಆತನ ಬಳಿಗೆ ಕಳುಹಿಸಿದನು.
- 4ಅವರು ಯೇಸುವಿನ ಬಳಿಗೆ ಬಂದು ಆತನಿಗೆ ಒತ್ತಾಯ ಮಾಡಿ--ನೀನು (ಅವನ ಆಳನ್ನು) ಸ್ವಸ್ಥಮಾಡಬೇಕು; ಯಾಕಂದರೆ ಅವನು ಯೋಗ್ಯನಾಗಿದ್ದಾನೆ.
- 5ಅವನು ನಮ್ಮ ಜನಾಂಗವನ್ನು ಪ್ರೀತಿಸುವದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ ಎಂದು ಬೇಡಿಕೊಂಡರು.
- 6ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ.
- 7ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು;
Cross references
- 2 Chronicles 2:11–12 2 ಪೂರ್ವಕಾಲವೃತ್ತಾಂತ 2:11–12ಆಗ ತೂರಿನ ಅರಸನಾದ ಹಿರಾಮನು ಪ್ರತ್ಯು ತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿಕರ್ತನು ತನ್ನ ಜನರನ್ನು ಪ್ರೀತಿ ಮಾಡಿದ್ದರಿಂದ ಆತನು ನಿನ್ನನ್ನು ಅವರ ಮೇಲೆ ಅರಸನಾಗಲು ಮಾಡಿದ್ದಾನೆ ಎಂದು ಹೇಳಿದನು. ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ.
- 1 John 3:14 1 ಯೋಹಾನನು 3:14ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
- 1 Chronicles 29:3–9 1 ಪೂರ್ವಕಾಲವೃತ್ತಾಂತ 29:3–9ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ. ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು. ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು. ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು. ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
- 1 John 5:1–3 1 ಯೋಹಾನನು 5:1–3ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ. ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ. ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- 1 John 3:18–19 1 ಯೋಹಾನನು 3:18–19ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು. ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
- 1 Kings 5:1 1 ಅರಸುಗಳು 5:1ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು.
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- Ezra 7:27–28 ಎಜ್ರನು 7:27–28ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು. ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.