Luke · chapter 7 · verse 50
Luke 7:50 in Kannada
ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
Aaga aatanu aa streege--ninna nambikeyu ninnannu rakshisiyade, samaadhaanadinda hogu andanu.
Luke 7:50 in English
- King James Version (KJV)
- And he said to the woman, Thy faith hath saved thee; go in peace.
- World English Bible (WEB)
- He said to the woman, “Your faith has saved you. Go in peace.”
- American Standard Version (ASV)
- And he said unto the woman, Thy faith hath saved thee; go in peace.
- Bible in Basic English (BBE)
- And he said to the woman, By your faith you have salvation; go in peace.
- Darby Translation (DBY)
- And he said to the woman, Thy faith has saved thee; go in peace.
- Webster's Bible (WBS)
- And he said to the woman, Thy faith hath saved thee; go in peace.
- Young's Literal Translation (YLT)
- and he said unto the woman, 'Thy faith have saved thee, be going on to peace.'
Read in context
- 48ಆತನು ಆಕೆಗೆ--ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
- 49ಆತನ ಸಂಗಡ ಊಟಕ್ಕೆ ಕೂತವರು ತಮ್ಮೊಳಗೆ--ಪಾಪಗಳನ್ನು ಸಹ ಕ್ಷಮಿಸುವದಕ್ಕೆ ಈತನು ಯಾರು ಎಂದು ತಮ್ಮಲ್ಲಿ ಅಂದುಕೊಳ್ಳಲಾರಂಭಿಸಿದರು.ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
- 50ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
Cross references
- Mark 5:34 ಮಾರ್ಕನು 5:34ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
- Luke 8:48 ಲೂಕನು 8:48ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
- Luke 18:42 ಲೂಕನು 18:42ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
- Matthew 9:22 ಮತ್ತಾಯನು 9:22ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
- Mark 10:52 ಮಾರ್ಕನು 10:52ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
- Ephesians 2:8–10 ಎಫೆಸದವರಿಗೆ 2:8–10ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ. ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Romans 5:1–2 ರೋಮಾಪುರದವರಿಗೆ 5:1–2ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ. ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
- James 2:14–26 ಯಾಕೋಬನು 2:14–26ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ? ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು? ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ. ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು. ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ. ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ? ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ? ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ? ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು. ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ. ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ. ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
- Habakkuk 2:4 ಹಬಕ್ಕೂಕ 2:4ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
- Luke 8:42 ಲೂಕನು 8:42ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
- Luke 8:18 ಲೂಕನು 8:18ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
- Ecclesiastes 9:7 ಪ್ರಸಂಗಿ 9:7ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.