Luke · chapter 8 · verse 13
Luke 8:13 in Kannada
ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
Bandeya neladavaru yaarandare, avaru vaakyavannu kelidaaga santoshadinda angeekarisuvaru; ivaru berilladiruvadarinda svalpakaala nambi shodhane bandaaga biddu hoguvaru.
Luke 8:13 in English
- King James Version (KJV)
- They on the rock [are they], which, when they hear, receive the word with joy; and these have no root, which for a while believe, and in time of temptation fall away.
- World English Bible (WEB)
- Those on the rock are they who, when they hear, receive the word with joy; but these have no root. They believe for a while, then fall away in time of temptation.
- American Standard Version (ASV)
- And those on the rock [are] they who, when they have heard, receive the word with joy; and these have no root, who for a while believe, and in time of temptation fall away.
- Bible in Basic English (BBE)
- And those on the rock are those who with joy give hearing to the word; but having no root, they have faith for a time, and when the test comes they give up.
- Darby Translation (DBY)
- But those upon the rock, those who when they hear receive the word with joy; and these have no root, who believe for a time, and in time of trial fall away.
- Webster's Bible (WBS)
- They on the rock [are they] , who, when they hear, receive the word with joy; and these have no root, who for a while believe, and in time of temptation fall away.
- Young's Literal Translation (YLT)
- 'And those upon the rock: They who, when they may hear, with joy do receive the word, and these have no root, who for a time believe, and in time of temptation fall away.
Read in context
- 11ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
- 12ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
- 13ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
- 14ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
- 15ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
Cross references
- Hosea 6:4 ಹೋಶೇಯ 6:4ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
- John 5:35 ಯೋಹಾನನು 5:35ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
- Proverbs 12:12 ಜ್ಞಾನೋಕ್ತಿಗಳು 12:12ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ.
- Ezekiel 33:32 ಯೆಹೆಜ್ಕೇಲನು 33:32ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ.ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
- 2 Peter 2:22 2 ಪೇತ್ರನು 2:22ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Jude 1:12 ಯೂದನು 1:12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- Ephesians 3:17 ಎಫೆಸದವರಿಗೆ 3:17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- 1 Corinthians 15:2 1 ಕೊರಿಂಥದವರಿಗೆ 15:2ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.
- 2 Peter 2:20 2 ಪೇತ್ರನು 2:20ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
- John 8:30–32 ಯೋಹಾನನು 8:30–32ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು. ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ. ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
- Galatians 3:1 ಗಲಾತ್ಯದವರಿಗೆ 3:1ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
- Galatians 3:4 ಗಲಾತ್ಯದವರಿಗೆ 3:4ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ?