Luke · chapter 8 · verse 15
Luke 8:15 in Kannada
ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
Aadare olle bhoomiyavaru yaarandare yathaarthavaada olle hrudayadinda vaakyavannu keli adanu kaikondu taalmeyinda phalisuvavare.
Luke 8:15 in English
- King James Version (KJV)
- But that on the good ground are they, which in an honest and good heart, having heard the word, keep [it], and bring forth fruit with patience.
- World English Bible (WEB)
- Those in the good ground, these are those who with an honest and good heart, having heard the word, hold it tightly, and produce fruit with perseverance.
- American Standard Version (ASV)
- And that in the good ground, these are such as in an honest and good heart, having heard the word, hold it fast, and bring forth fruit with patience.
- Bible in Basic English (BBE)
- And those in the good earth are those who, having given ear to the word, keep it with a good and true heart, and in quiet strength give fruit.
- Darby Translation (DBY)
- But that in the good ground, these are they who in an honest and good heart, having heard the word keep it, and bring forth fruit with patience.
- Webster's Bible (WBS)
- But that on the good ground are they, who in an honest and good heart, having heard the word, keep [it] , and bring forth fruit with patience.
- Young's Literal Translation (YLT)
- 'And that in the good ground: These are they, who in an upright and good heart, having heard the word, do retain [it], and bear fruit in continuance.
Read in context
- 13ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
- 14ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
- 15ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
- 16ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆ ಯಿಂದ ಮುಚ್ಚುವದಿಲ್ಲ; ಇಲ್ಲವೆ ಮಂಚದ ಕೆಳಗೆ ಇಡುವದಿಲ್ಲ; ಆದರೆ ಒಳಗೆ ಪ್ರವೇಶಿಸುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
- 17ಪ್ರಕಟವಾಗದೆ ಮರೆಯಾಗಿ ರುವಂತದ್ದು ಒಂದೂ ಇರುವದಿಲ್ಲ ತಿಳಿಯಲ್ಪಡದೆಯೂ ಬೈಲಿಗೆ ಬಾರದೆಯೂ ಇರುವ ರಹಸ್ಯವು ಯಾವದೂ ಇಲ್ಲ.
Cross references
- Hebrews 10:36 ಇಬ್ರಿಯರಿಗೆ 10:36ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
- Galatians 5:22–26 ಗಲಾತ್ಯದವರಿಗೆ 5:22–26ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ. ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ. ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ. ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
- Colossians 1:10 ಕೊಲೊಸ್ಸೆಯವರಿಗೆ 1:10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
- Luke 6:45 ಲೂಕನು 6:45ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
- Colossians 1:6 ಕೊಲೊಸ್ಸೆಯವರಿಗೆ 1:6ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
- 1 John 2:3 1 ಯೋಹಾನನು 2:3ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
- Matthew 24:13 ಮತ್ತಾಯನು 24:13ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
- John 14:15 ಯೋಹಾನನು 14:15ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
- James 1:22–25 ಯಾಕೋಬನು 1:22–25ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ. ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು. ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು. ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- Romans 6:22 ರೋಮಾಪುರದವರಿಗೆ 6:22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- John 15:10 ಯೋಹಾನನು 15:10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.