Luke · chapter 8 · verse 18
Luke 8:18 in Kannada
ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
Aadadarinda neevu keluvavugala vishayadalli echcharike tandukolliri. Yaakandare iddavanige kodalpaduvadu; illadavanige tanage untendu nenasuvadannoo avaninda tegeyalpa duvadu endu helidanu.
Luke 8:18 in English
- King James Version (KJV)
- Take heed therefore how ye hear: for whosoever hath, to him shall be given; and whosoever hath not, from him shall be taken even that which he seemeth to have.
- World English Bible (WEB)
- Be careful therefore how you hear. For whoever has, to him will be given; and whoever doesn’t have, from him will be taken away even that which he thinks he has.”
- American Standard Version (ASV)
- Take heed therefore how ye hear: for whosoever hath, to him shall be given; and whosoever hath not, from him shall be taken away even that which he thinketh he hath.
- Bible in Basic English (BBE)
- So take care how you give hearing, for to him who has will be given, and from him who has not will be taken even what he seems to have.
- Darby Translation (DBY)
- Take heed therefore how ye hear; for whosoever has, to him shall be given, and whosoever has not, even what he seems to have shall be taken from him.
- Webster's Bible (WBS)
- Take heed therefore how ye hear: for whoever hath, to him shall be given; and whoever hath not, from him shall be taken even that which he seemeth to have.
- Young's Literal Translation (YLT)
- 'See, therefore, how ye hear, for whoever may have, there shall be given to him, and whoever may not have, also what he seemeth to have, shall be taken from him.'
Read in context
- 16ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆ ಯಿಂದ ಮುಚ್ಚುವದಿಲ್ಲ; ಇಲ್ಲವೆ ಮಂಚದ ಕೆಳಗೆ ಇಡುವದಿಲ್ಲ; ಆದರೆ ಒಳಗೆ ಪ್ರವೇಶಿಸುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
- 17ಪ್ರಕಟವಾಗದೆ ಮರೆಯಾಗಿ ರುವಂತದ್ದು ಒಂದೂ ಇರುವದಿಲ್ಲ ತಿಳಿಯಲ್ಪಡದೆಯೂ ಬೈಲಿಗೆ ಬಾರದೆಯೂ ಇರುವ ರಹಸ್ಯವು ಯಾವದೂ ಇಲ್ಲ.
- 18ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
- 19ತರುವಾಯ ಆತನ ತಾಯಿಯೂ ಆತನ ಸಹೋದರರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
- 20ಆಗ ಒಬ್ಬನು ಆತನಿಗೆ--ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ನೋಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
Cross references
- Matthew 13:12 ಮತ್ತಾಯನು 13:12ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
- Mark 4:23–25 ಮಾರ್ಕನು 4:23–25ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು. ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು. ಯಾಕಂ ದರೆ ಯಾವನಿಗೆ ಇದೆಯೋ ಅವನಿಗೆ ಕೊಡಲ್ಪಡುವದು; ಯಾವನಿಗೆ ಇಲ್ಲವೋ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು ಎಂದು ಹೇಳಿದನು.
- Luke 19:26 ಲೂಕನು 19:26ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.
- Matthew 25:29 ಮತ್ತಾಯನು 25:29ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.
- Proverbs 2:2–5 ಜ್ಞಾನೋಕ್ತಿಗಳು 2:2–5ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
- Hebrews 2:1 ಇಬ್ರಿಯರಿಗೆ 2:1ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
- John 15:2 ಯೋಹಾನನು 15:2ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
- Acts 17:11 ಅಪೊಸ್ತಲರ ಕೃತ್ಯಗಳು 17:11ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
- 1 Corinthians 14:37 1 ಕೊರಿಂಥದವರಿಗೆ 14:37ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
- 1 Peter 2:1–2 1 ಪೇತ್ರನು 2:1–2ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ. ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
- Matthew 7:22–23 ಮತ್ತಾಯನು 7:22–23ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- James 1:19–26 ಯಾಕೋಬನು 1:19–26ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ. ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ. ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ. ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ. ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು. ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು. ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು. ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.