Luke · chapter 8 · verse 21
Luke 8:21 in Kannada
ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.
Aadare aatanu pratyuttaravaagi avarige--devara vaakyavannu keli adarante maaduva ivare nanna taayiyoo nanna sahodararoo aagiddaare endu helidanu.
Luke 8:21 in English
- King James Version (KJV)
- And he answered and said unto them, My mother and my brethren are these which hear the word of God, and do it.
- World English Bible (WEB)
- But he answered them, “My mother and my brothers are these who hear the word of God and do it.”
- American Standard Version (ASV)
- But he answered and said unto them, My mother and my brethren are these that hear the word of God, and do it.
- Bible in Basic English (BBE)
- But he said to them in answer, My mother and my brothers are those who have knowledge of the word of God and do it.
- Darby Translation (DBY)
- But he answering said to them, My mother and my brethren are those who hear the word of God and do [it].
- Webster's Bible (WBS)
- And he answered and said to them, My mother and my brethren are these who hear the word of God, and do it.
- Young's Literal Translation (YLT)
- and he answering said unto them, 'My mother and my brethren! they are those who the word of God are hearing, and doing.'
Read in context
- 19ತರುವಾಯ ಆತನ ತಾಯಿಯೂ ಆತನ ಸಹೋದರರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
- 20ಆಗ ಒಬ್ಬನು ಆತನಿಗೆ--ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ನೋಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
- 21ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.
- 22ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.
- 23ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
Cross references
- Luke 11:27–28 ಲೂಕನು 11:27–28ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು. ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- James 1:22 ಯಾಕೋಬನು 1:22ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
- John 13:17 ಯೋಹಾನನು 13:17ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
- 3 John 1:11 3 ಯೋಹಾನನು 1:11ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
- 1 John 2:29 1 ಯೋಹಾನನು 2:29ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- Hebrews 2:11–13 ಇಬ್ರಿಯರಿಗೆ 2:11–13ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ-- ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.
- John 15:14–15 ಯೋಹಾನನು 15:14–15ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ. ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
- 2 Corinthians 6:18 2 ಕೊರಿಂಥದವರಿಗೆ 6:18ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- John 6:28–29 ಯೋಹಾನನು 6:28–29ಆಗ ಅವರು ಆತನಿಗೆ--ನಾವು ದೇವರ ಕ್ರಿಯೆ ಗಳನ್ನು ಮಾಡುವಂತೆ ಏನು ಮಾಡಬೇಕು ಎಂದು ಕೇಳಿದ್ದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.
- Luke 8:15 ಲೂಕನು 8:15ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
- Matthew 7:21–26 ಮತ್ತಾಯನು 7:21–26ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು. ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು. ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
- Matthew 25:40 ಮತ್ತಾಯನು 25:40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.