Luke · chapter 9 · verse 28
Luke 9:28 in Kannada
ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
Ee maatugalannu heli sumaaru entu dinagalaada mele aadaddenandare, aatanu petra yohaana mattu yaakobarannu karakondu praarthane maaduvadakkaagi bettavanneridanu.
Luke 9:28 in English
- King James Version (KJV)
- And it came to pass about an eight days after these sayings, he took Peter and John and James, and went up into a mountain to pray.
- World English Bible (WEB)
- About eight days after these sayings, he took with him Peter, John, and James, and went up onto the mountain to pray.
- American Standard Version (ASV)
- And it came to pass about eight days after these sayings, that he took with him Peter and John and James, and went up into the mountain to pray.
- Bible in Basic English (BBE)
- And about eight days after he had said these things, he took Peter and John and James with him and went up into the mountain for prayer.
- Darby Translation (DBY)
- And it came to pass after these words, about eight days, that taking Peter and John and James he went up into a mountain to pray.
- Webster's Bible (WBS)
- And it came to pass, about eight days after these sayings, he took Peter, and John, and James, and went up upon a mountain to pray.
- Young's Literal Translation (YLT)
- And it came to pass, after these words, as it were eight days, that having taken Peter, and John, and James, he went up to the mountain to pray,
Read in context
- 26ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
- 27ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
- 28ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
- 29ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು.
- 30ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು.
Cross references
- Mark 14:33–36 ಮಾರ್ಕನು 14:33–36ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ-- ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು. ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು. ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
- Mark 9:2–13 ಮಾರ್ಕನು 9:2–13ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು. ಮತ್ತು ಆತನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷು ಹಿಮದಂತೆ ಹೆಚ್ಚು ಬೆಳ್ಳಗಾಗಿ ಹೊಳೆಯುತ್ತಿತ್ತು. ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು. ಆಗ ಪೇತ್ರನು ಯೇಸು ವಿಗೆ-- ಬೋಧಕನೇ, ನಾವು ಇಲ್ಲೆ ಇರುವದು ನಮಗೆ ಒಳ್ಳೇದು; ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ನಾವು ಕಟ್ಟುವೆವು ಎಂದು ಹೇಳಿದನು. ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು. ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು. ಕೂಡಲೆ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನು ಹೊರತು ಇನ್ನಾರನ್ನೂ ನೋಡಲಿಲ್ಲ. ಅವರು ಬೆಟ್ಟದಿಂದಿಳಿದು ಬರುವಾಗ ಮನುಷ್ಯ ಕುಮಾರನು ಸತ್ತವರೊಳಗಿಂದ ಎದ್ದು ಬರುವ ವರೆಗೆ ತಾವು ಕಂಡವುಗಳನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು. ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು. ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು. ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ? ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
- Psalm 109:4 ಕೀರ್ತನೆಗಳು 109:4ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
- Matthew 26:37–39 ಮತ್ತಾಯನು 26:37–39ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು. ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು. ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
- Matthew 17:1–13 ಮತ್ತಾಯನು 17:1–13ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು. ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು. ಇಗೋ, ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಆತನ ಕೂಡ ಮಾತನಾಡು ತ್ತಿದ್ದರು. ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು. ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು. ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು. ಆಗ ಯೇಸು ಬಂದು ಅವರನ್ನು ಮುಟ್ಟಿ--ಏಳಿರಿ, ಹೆದರಬೇಡಿರಿ ಎಂದು ಹೇಳಿದನು. ಅವರು ತಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ನೋಡಲಿಲ್ಲ. ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು. ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು. ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ; ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
- Luke 6:12 ಲೂಕನು 6:12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- Luke 9:18 ಲೂಕನು 9:18ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.
- Mark 6:46 ಮಾರ್ಕನು 6:46ಆತನು ಅವರನ್ನು ಕಳುಹಿಸಿದ ನಂತರ ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೊರಟು ಹೋದನು.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Luke 8:51 ಲೂಕನು 8:51ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
- Mark 1:35 ಮಾರ್ಕನು 1:35ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
- 2 Corinthians 13:1 2 ಕೊರಿಂಥದವರಿಗೆ 13:1ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
Original words (Greek)
- And · G1161δέ dé
- pass · G1096γίνομαι gínomai
- about · G5616ὡσεί hōseí
- an · G2250ἡμέρα hēméra
- eight · G3638ὀκτώ oktṓ
- days · G2250ἡμέρα hēméra
- after · G3326μετά metá
- these · G5128τούτους toútous
- sayings · G3056λόγος lógos
- took · G3880παραλαμβάνω paralambánō
- Peter · G4074Πέτρος Pétros
- and · G2532καί kaí
- John · G2491Ἰωάννης Iōánnēs
- and · G2532καί kaí
- James · G2385Ἰάκωβος Iákōbos
- up · G305ἀναβαίνω anabaínō
- into · G1519εἰς eis
- mountain · G3735ὄρος óros
- pray · G4336προσεύχομαι proseúchomai