Luke · chapter 9 · verse 3
Luke 9:3 in Kannada
ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
Aatanu avarige--neevu prayaanakkaagi kolugalannaagalee cheelavannaa galee rottiyannaagalee hanavannaagalee enoo takkollabediri; idallade nimage eradu angigaloo irabaaradu.
Luke 9:3 in English
- King James Version (KJV)
- And he said unto them, Take nothing for [your] journey, neither staves, nor scrip, neither bread, neither money; neither have two coats apiece.
- World English Bible (WEB)
- He said to them, “Take nothing for your journey—no staffs, nor wallet, nor bread, nor money. Don’t have two tunics each.
- American Standard Version (ASV)
- And he said unto them, Take nothing for your journey, neither staff, nor wallet, nor bread, nor money; neither have two coats.
- Bible in Basic English (BBE)
- And he said to them, Take nothing for your journey, no stick or bag or bread or money, and do not take two coats.
- Darby Translation (DBY)
- And he said to them, Take nothing for the way, neither staff, nor scrip, nor bread, nor money; nor to have two body-coats apiece.
- Webster's Bible (WBS)
- And he said to them, Take nothing for [your] journey, neither staffs, nor bag, neither bread, neither money; neither have two coats apiece.
- Young's Literal Translation (YLT)
- And he said unto them, 'Take nothing for the way, neither staff, nor scrip, nor bread, nor money; neither have two coats each;
Read in context
- 1ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.
- 2ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
- 3ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
- 4ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.
- 5ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
Cross references
- Luke 22:35 ಲೂಕನು 22:35ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- Luke 10:4–12 ಲೂಕನು 10:4–12ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ. ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ. ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು. ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ; ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ. ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ. ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ-- ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ. ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
- Matthew 10:9–14 ಮತ್ತಾಯನು 10:9–14ನಿಮ್ಮ ಹಮ್ಮಾಣಿಗಳಲ್ಲಿ ಬಂಗಾರ, ಬೆಳ್ಳಿ ಮತ್ತು ಹಿತ್ತಾಳೆ ಇಟ್ಟುಕೊಳ್ಳಬೇಡಿರಿ. ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ. ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ; ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ. ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ. ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
- Luke 3:11 ಲೂಕನು 3:11ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
- 2 Timothy 2:4 2 ತಿಮೊಥೆಯನಿಗೆ 2:4ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
- Mark 6:8–11 ಮಾರ್ಕನು 6:8–11ಅವರು ತಮ್ಮ ಪ್ರಯಾಣಕ್ಕಾಗಿ ಒಂದು ಕೋಲಿನ ಹೊರತು ಚೀಲವನ್ನಾಗಲೀ ರೊಟ್ಟಿಯನ್ನಾಗಲೀ ಹವ್ಮೆಾಣಿಯಲ್ಲಿ ಹಣವನ್ನಾಗಲೀ ತಕ್ಕೊಳ್ಳಬಾರ ದೆಂತಲೂ ಕೆರಗಳನ್ನು ಮೆಟ್ಟಿಕೊಂಡಿರಬೇಕೆಂದೂ ಎರಡು ಅಂಗಿಗಳನ್ನು ಹಾಕಿಕೊಳ್ಳಬಾರದೆಂದೂ ಆಜ್ಞಾ ಪಿಸಿದನು. ಇದಲ್ಲದೆ ಆತನು ಅವರಿಗೆ--ಯಾವ ಸ್ಥಳದಲ್ಲಿಯಾದರೂ ಒಂದು ಮನೆಯೊಳಕ್ಕೆ ನೀವು ಪ್ರವೇಶಿಸಿದರೆ ಆ ಸ್ಥಳದಿಂದ ನೀವು ಹೊರಡುವ ತನಕ ಅಲ್ಲೇ ಇಳುಕೊಳ್ಳಿರಿ. ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
- Luke 12:22 ಲೂಕನು 12:22ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- Luke 12:28 ಲೂಕನು 12:28ಓ ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ?
- Luke 5:29 ಲೂಕನು 5:29ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.