Luke · chapter 9 · verse 30
Luke 9:30 in Kannada
ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು.
Igo, moshe mattu eleeya emba ibbaru purusharu aatanondige maatanaaduttiddaru.
Luke 9:30 in English
- King James Version (KJV)
- And, behold, there talked with him two men, which were Moses and Elias:
- World English Bible (WEB)
- Behold, two men were talking with him, who were Moses and Elijah,
- American Standard Version (ASV)
- And behold, there talked with him two men, who were Moses and Elijah;
- Bible in Basic English (BBE)
- And two men, Moses and Elijah, were talking with him;
- Darby Translation (DBY)
- And lo, two men talked with him, who were Moses and Elias,
- Webster's Bible (WBS)
- And behold, there talked with him two men, who were Moses and Elijah.
- Young's Literal Translation (YLT)
- And lo, two men were speaking together with him, who were Moses and Elijah,
Read in context
- 28ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
- 29ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು.
- 30ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು.
- 31ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
- 32ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
Cross references
- Luke 1:17 ಲೂಕನು 1:17ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- Hebrews 3:3–6 ಇಬ್ರಿಯರಿಗೆ 3:3–6ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ. ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ. ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು. ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- 2 Corinthians 3:7–11 2 ಕೊರಿಂಥದವರಿಗೆ 3:7–11ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು. ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ? ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು. ಈಗ ಅತ್ಯಧಿಕವಾದ ಪ್ರಭಾವವುಳ್ಳದ್ದು ಬಂದದ್ದರಿಂದ ಪ್ರಭಾವವಾಗಿದ್ದದ್ದು ಈ ವಿಷಯದಲ್ಲಿ ಪ್ರಭಾವ ವಿಲ್ಲದ್ದಾಯಿತು. ಇಲ್ಲದೆ ಹೋಗುವಂಥದ್ದು ಪ್ರಭಾವ ವುಳ್ಳದ್ದಾಗಿದ್ದರೆ ಇರುವಂಥದ್ದು ಬಹು ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕಲ್ಲವೇ?
- Luke 24:27 ಲೂಕನು 24:27ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- Luke 24:44 ಲೂಕನು 24:44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- Luke 9:19 ಲೂಕನು 9:19ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
- Romans 3:21–23 ರೋಮಾಪುರದವರಿಗೆ 3:21–23ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ. ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
- Mark 9:4–6 ಮಾರ್ಕನು 9:4–6ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು. ಆಗ ಪೇತ್ರನು ಯೇಸು ವಿಗೆ-- ಬೋಧಕನೇ, ನಾವು ಇಲ್ಲೆ ಇರುವದು ನಮಗೆ ಒಳ್ಳೇದು; ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ನಾವು ಕಟ್ಟುವೆವು ಎಂದು ಹೇಳಿದನು. ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು.
- Matthew 17:3–4 ಮತ್ತಾಯನು 17:3–4ಇಗೋ, ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಆತನ ಕೂಡ ಮಾತನಾಡು ತ್ತಿದ್ದರು. ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು.
- James 5:17–18 ಯಾಕೋಬನು 5:17–18ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ. ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.