Luke · chapter 9 · verse 44
Luke 9:44 in Kannada
ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
Ee maatugalu nimma kivigala aalakke iliyali; yaakandare manushya kumaaranu manushyara kaigalige oppisalpaduvanu endu helidanu.
Luke 9:44 in English
- King James Version (KJV)
- Let these sayings sink down into your ears: for the Son of man shall be delivered into the hands of men.
- World English Bible (WEB)
- “Let these words sink into your ears, for the Son of Man will be delivered up into the hands of men.”
- American Standard Version (ASV)
- Let these words sink into your ears: for the Son of man shall be delivered up into the hands of men.
- Bible in Basic English (BBE)
- Let these words go deep into your ears, for the Son of man will be given up into the hands of men.
- Darby Translation (DBY)
- Do ye let these words sink into your ears. For the Son of man is about to be delivered into men's hands.
- Webster's Bible (WBS)
- Let these sayings sink down into your ears: for the Son of man will be delivered into the hands of men.
- Young's Literal Translation (YLT)
- 'Lay ye to your ears these words, for the Son of Man is about to be delivered up to the hands of men.'
Read in context
- 42ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
- 43ಆಗ ಅವರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು.ಆದರೆ ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ--
- 44ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
- 45ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
- 46ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು.
Cross references
- Luke 9:22 ಲೂಕನು 9:22ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
- Acts 2:23 ಅಪೊಸ್ತಲರ ಕೃತ್ಯಗಳು 2:23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
- Hebrews 2:1 ಇಬ್ರಿಯರಿಗೆ 2:1ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
- Luke 2:19 ಲೂಕನು 2:19ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.
- Mark 9:31 ಮಾರ್ಕನು 9:31ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
- Luke 18:31 ಲೂಕನು 18:31ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
- Matthew 21:38–39 ಮತ್ತಾಯನು 21:38–39ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
- Mark 8:31 ಮಾರ್ಕನು 8:31ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
- Luke 1:66 ಲೂಕನು 1:66ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
- 2 Samuel 24:14 2 ಸಮುವೇಲನು 24:14ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
- Isaiah 32:9–10 ಯೆಶಾಯ 32:9–10ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ. ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು.
- Matthew 26:2 ಮತ್ತಾಯನು 26:2ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.