Luke · chapter 9 · verse 55
Luke 9:55 in Kannada
ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
Aadare aatanu tirugikondu avarannu gadarisi--neevu yaava taravaada aatmadavaraagiddeerendu nimage tiliyadu.
Luke 9:55 in English
- King James Version (KJV)
- But he turned, and rebuked them, and said, Ye know not what manner of spirit ye are of.
- World English Bible (WEB)
- But he turned and rebuked them, “You don’t know of what kind of spirit you are.
- American Standard Version (ASV)
- But he turned, and rebuked them.
- Bible in Basic English (BBE)
- But turning round he said sharp words to them.
- Darby Translation (DBY)
- But turning he rebuked them [and said, Ye know not of what spirit ye are].
- Webster's Bible (WBS)
- But he turned, and rebuked them, and said, Ye know not what manner of spirit ye are of.
- Young's Literal Translation (YLT)
- and having turned, he rebuked them, and said, 'Ye have not known of what spirit ye are;
Read in context
- 53ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.
- 54ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
- 55ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
- 56ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.
- 57ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.
Cross references
- Job 2:10 ಯೋಬನು 2:10ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
- 1 Peter 3:9 1 ಪೇತ್ರನು 3:9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- Matthew 16:23 ಮತ್ತಾಯನು 16:23ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
- Job 26:4 ಯೋಬನು 26:4ಯಾವನ ಸಂಗಡ ಮಾತನಾಡುತ್ತೀ? ಯಾವನ ಶ್ವಾಸವು ನಿನ್ನಿಂದ ಹೊರಡುತ್ತದೆ?
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- Job 31:29–31 ಯೋಬನು 31:29–31ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ, ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ. ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
- Matthew 26:51 ಮತ್ತಾಯನು 26:51ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
- Job 34:4–9 ಯೋಬನು 34:4–9ನ್ಯಾಯವನ್ನು ನಾವು ಆದುಕೊಳ್ಳೋಣ; ಒಳ್ಳೇದೇನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ. ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು. ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು. ಯೋಬನಂತೆ ಹಾಸ್ಯವನ್ನು ನೀರಿನಂತೆ ಕುಡಿಯುವ ಪುರುಷನು ಯಾರು? ಅವನು ಅಪರಾಧ ಮಾಡು ವವರ ಸಹವಾಸದಲ್ಲಿ ಹೋಗುತ್ತಾ, ದುಷ್ಟ ಜನರ ಸಂಗಡ ನಡೆದುಕೊಳ್ಳುತ್ತಾನೆ. ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ.
- Job 35:2–4 ಯೋಬನು 35:2–4ನನ್ನ ನೀತಿಯು ದೇವರ ನೀತಿ ಗಿಂತ ದೊಡ್ಡದು ಎಂದು ನೀನು ಹೇಳಿದ್ದು ಸರಿಯಾದ ದ್ದೆಂದು ನೀನು ನೆನಸುತ್ತೀಯೋ? ನೀನು--ನನಗೆ ಏನು ಪ್ರಯೋಜನವಾಗುವದು? ನನ್ನ ಪಾಪವು ತೊಳೆ ಯಲ್ಪಟ್ಟರೆ ನನಗೆ ಲಾಭವೇನು ಎನ್ನುವಿ. ನಾನು ನಿನಗೂ ನಿನ್ನ ಸಂಗಡ ಇರುವ ಸ್ನೇಹಿತರಿಗೂ ಉತ್ತರ ಕೊಡುತ್ತೇನೆ.
- Acts 23:3–5 ಅಪೊಸ್ತಲರ ಕೃತ್ಯಗಳು 23:3–5ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು. ಹತ್ತಿರ ನಿಂತಿದ್ದವರು ದೇವರ ಮಹಾಯಾಜಕನನ್ನು ನೀನು ದೂಷಿಸುತ್ತೀಯೋ ಎಂದು ಕೇಳಿದರು. ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.
- 1 Samuel 24:4–7 1 ಸಮುವೇಲನು 24:4–7ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು. ಹಾಗೆ ಮಾಡಿದ ಮೇಲೆ ಅವನು ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿ ಕೊಂಡದ್ದರಿಂದ ದಾವೀದನ ಹೃದಯವು ಬಡು ಕೊಂಡಿತು. ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು. ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು.