Malachi · chapter 1 · verse 7
Malachi 1:7 in Kannada
ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.
Nanna balipeethada mele apavitravaada rottiyannu arpisi--yaavadaralli ninnannu naavu apavitra maadiddevendu helutteeri. Kartana meju heenavaadaddendu neevu heluvadarindale.
Malachi 1:7 in English
- King James Version (KJV)
- Ye offer polluted bread upon mine altar; and ye say, Wherein have we polluted thee? In that ye say, The table of the LORD [is] contemptible.
- World English Bible (WEB)
- You offer polluted bread on my altar. You say, ‘How have we polluted you?’ In that you say, ‘The LORD’s table is contemptible.’
- American Standard Version (ASV)
- Ye offer polluted bread upon mine altar. And ye say, Wherein have we polluted thee? In that ye say, The table of Jehovah is contemptible.
- Bible in Basic English (BBE)
- You put unclean bread on my altar. And you say, How have we made it unclean? By your saying, The table of the Lord is of no value.
- Darby Translation (DBY)
- Ye offer polluted bread upon mine altar; and ye say, Wherein have we polluted thee? In that ye say, The table of Jehovah is contemptible.
- Webster's Bible (WBS)
- Ye offer polluted bread upon my altar? and ye say, In what have we polluted thee? In that ye say, The table of the LORD [is] contemptible.
- Young's Literal Translation (YLT)
- Ye are bringing nigh on Mine altar polluted bread, And ye have said: 'In what have we polluted Thee?' In your saying: 'The table of Jehovah — it [is] despicable,'
Read in context
- 5ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ.
- 6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
- 7ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.
- 8ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
- 9ಹಾಗಾದರೆ ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು --ಇದು ನಿಮ್ಮಿಂದಲೇ ಆಯಿತು; ನಿಮಗೆ ಆತನು ಮುಖದಾಕ್ಷಿಣ್ಯ ತೋರಿಸುವನೋ?
Cross references
- Malachi 1:12 ಮಲಾಕಿಯ 1:12ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.
- 1 Corinthians 11:27–32 1 ಕೊರಿಂಥದವರಿಗೆ 11:27–32ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು. ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ. ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು. ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ. ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ. ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
- 1 Corinthians 10:21 1 ಕೊರಿಂಥದವರಿಗೆ 10:21ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
- Malachi 1:8 ಮಲಾಕಿಯ 1:8ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
- 1 Samuel 2:15–17 1 ಸಮುವೇಲನು 2:15–17ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು. ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು. ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.
- Leviticus 21:6 ಯಾಜಕಕಾಂಡ 21:6ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.
- Deuteronomy 15:21 ಧರ್ಮೋಪದೇಶಕಾಂಡ 15:21ಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ
- Ezekiel 41:22 ಯೆಹೆಜ್ಕೇಲನು 41:22ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು.
- Leviticus 2:11 ಯಾಜಕಕಾಂಡ 2:11ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.
- 1 Corinthians 11:21–22 1 ಕೊರಿಂಥದವರಿಗೆ 11:21–22ಭೋಜನವಾಗುವಲ್ಲಿ ಪ್ರತಿ ಯೊಬ್ಬನು ತನ್ನದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ. ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.