Malachi · chapter 2 · verse 10
Malachi 2:10 in Kannada
ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?
Nammellarige obbane tandeyallavo? Nammannu obbane devaru srushtisidanallavo? Yaake prati yobbanu tanna sahodaranige virodhavaagi vanchaneyinda nadedu namma tandegala odambadike yannu apavitra maadutteve?
Malachi 2:10 in English
- King James Version (KJV)
- Have we not all one father? hath not one God created us? why do we deal treacherously every man against his brother, by profaning the covenant of our fathers?
- World English Bible (WEB)
- Don’t we all have one father? Hasn’t one God created us? Why do we deal treacherously every man against his brother, profaning the covenant of our fathers?
- American Standard Version (ASV)
- Have we not all one father? hath not one God created us? why do we deal treacherously every man against his brother, profaning the covenant of our fathers?
- Bible in Basic English (BBE)
- Have we not all one father? has not one God made us? why are we, every one of us, acting falsely to his brother, putting shame on the agreement of our fathers?
- Darby Translation (DBY)
- Have we not all one father? Hath not one God created us? Why do we deal unfaithfully every man against his brother, by profaning the covenant of our fathers?
- Webster's Bible (WBS)
- Have we not all one father? hath not one God created us? why do we deal treacherously every man against his brother, by profaning the covenant of our fathers?
- Young's Literal Translation (YLT)
- Have we not all one father? Hath not our God prepared us? Wherefore do we deal treacherously, Each against his brother, To pollute the covenant of our fathers?
Read in context
- 8ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
- 9ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
- 10ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?
- 11ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.
- 12ಇದನ್ನು ಮಾಡುವ ಮನುಷ್ಯನನ್ನು ಅಂದರೆ, ಯಜಮಾನನನ್ನು ಜ್ಞಾನಿಯನ್ನು ಸೈನ್ಯಗಳ ಕರ್ತನಿಗೆ ಕಾಣಿಕೆ ಅರ್ಪಿಸುವ ವನನ್ನು ಕರ್ತನು ಯಾಕೋಬಿನ ಗುಡಾರಗಳೊಳಗಿಂದ ತೆಗೆದುಬಿಡುವನು.
Cross references
- Psalm 100:3 ಕೀರ್ತನೆಗಳು 100:3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
- Malachi 2:11 ಮಲಾಕಿಯ 2:11ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.
- 1 Corinthians 8:6 1 ಕೊರಿಂಥದವರಿಗೆ 8:6ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
- Ephesians 4:6 ಎಫೆಸದವರಿಗೆ 4:6ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ.
- Isaiah 63:16 ಯೆಶಾಯ 63:16ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
- Isaiah 64:8 ಯೆಶಾಯ 64:8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
- Malachi 2:14–15 ಮಲಾಕಿಯ 2:14–15ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ. ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
- Matthew 3:9 ಮತ್ತಾಯನು 3:9ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- Micah 7:2–6 ಮೀಕ 7:2–6ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ. ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ. ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು. ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ. ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
- Acts 7:26 ಅಪೊಸ್ತಲರ ಕೃತ್ಯಗಳು 7:26ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
- John 8:41 ಯೋಹಾನನು 8:41ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.
- Ezra 9:11–14 ಎಜ್ರನು 9:11–14ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ. ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು. ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.