Malachi · chapter 2 · verse 7
Malachi 2:7 in Kannada
ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
Yaajakana tutigalu tiluvalikeyannu kaapaadatakkaddu, nyaayapramaana vannu avana baayalli hudukatakkaddu; yaakandare avanu sainyagala kartana sevakane.
Malachi 2:7 in English
- King James Version (KJV)
- For the priest’s lips should keep knowledge, and they should seek the law at his mouth: for he [is] the messenger of the LORD of hosts.
- World English Bible (WEB)
- For the priest’s lips should keep knowledge, and they should seek the law at his mouth; for he is the messenger of the LORD of Armies.
- American Standard Version (ASV)
- For the priest’s lips should keep knowledge, and they should seek the law at his mouth; for he is the messenger of Jehovah of hosts.
- Bible in Basic English (BBE)
- For it is right for the priest's lips to keep knowledge, and for men to be waiting for the law from his mouth: for he is the servant sent from the Lord of armies.
- Darby Translation (DBY)
- For the priest's lips should keep knowledge, and at his mouth they seek the law; for he is the messenger of Jehovah of hosts.
- Webster's Bible (WBS)
- For the priest's lips should keep knowledge, and they should seek the law at his mouth: for he [is] the messenger of the LORD of hosts.
- Young's Literal Translation (YLT)
- For the lips of a priest preserve knowledge, And law they do seek from his mouth, For a messenger of Jehovah of Hosts he [is].
Read in context
- 5ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು.
- 6ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.
- 7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- 8ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
- 9ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
Cross references
- 2 Timothy 2:24–25 2 ತಿಮೊಥೆಯನಿಗೆ 2:24–25ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು. ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Leviticus 10:11 ಯಾಜಕಕಾಂಡ 10:11ನೀವು ಇಸ್ರಾಯೇಲ್ ಮಕ್ಕಳಿಗೆ ಕರ್ತನು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ ಎಲ್ಲಾ ಕಟ್ಟಳೆಗಳನ್ನು ಬೋಧಿಸುವದಕ್ಕಾಗಿಯೂ ಇರುವದು.
- Deuteronomy 21:5 ಧರ್ಮೋಪದೇಶಕಾಂಡ 21:5ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
- 2 Corinthians 5:20 2 ಕೊರಿಂಥದವರಿಗೆ 5:20ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Acts 16:17 ಅಪೊಸ್ತಲರ ಕೃತ್ಯಗಳು 16:17ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
- Ezra 7:10 ಎಜ್ರನು 7:10ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.
- John 20:21 ಯೋಹಾನನು 20:21ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
- 1 Thessalonians 4:8 1 ಥೆಸಲೊನೀಕದವರಿಗೆ 4:8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- John 13:20 ಯೋಹಾನನು 13:20ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
- 2 Chronicles 30:22 2 ಪೂರ್ವಕಾಲವೃತ್ತಾಂತ 30:22ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
- Nehemiah 8:2–8 ನೆಹೆಮೀಯ 8:2–8ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು. ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು. ಎಜ್ರನು ಸಕಲ ಜನರ ಕಣ್ಣುಗಳ ಮುಂದೆ ಪುಸ್ತಕವನ್ನು ತೆರೆದನು; (ಯಾಕಂದರೆ ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ಇದ್ದನು;) ಅವನು ಅದನ್ನು ತೆರೆದಾಗ ಜನರೆಲ್ಲರೂ ಎದ್ದು ನಿಂತರು. ಆಗ ಎಜ್ರನು ಮಹಾ ದೇವಾರಾಗಿರುವ ಕರ್ತನನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಪ್ರತ್ಯುತ್ತರವಾಗಿ--ಆಮೆನ್, ಆಮೆನ್ ಎಂದು ಹೇಳಿ ನೆಲದ ವರೆಗೂ ತಮ್ಮ ತಲೆಗಳನ್ನು ಬೊಗ್ಗಿಸಿ ಕರ್ತ ನನ್ನು ಆರಾಧಿಸಿದರು ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು. ಹೀಗೆಯೇ ಅವರು ದೇವರ ನ್ಯಾಯಪ್ರಮಾಣದ ಪುಸ್ತಕವನ್ನು ಸ್ಪಷ್ಟವಾಗಿ ಓದಿ ಅದರ ಅರ್ಥವನ್ನು ಹೇಳಿ ಓದಿದ್ದನ್ನು ಜನರಿಗೆ ತಿಳಿಯುವಂತೆ ಮಾಡಿದರು.
- Jeremiah 15:19 ಯೆರೆಮೀಯ 15:19ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.