Malachi · chapter 2 · verse 9
Malachi 2:9 in Kannada
ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
Aadadarinda neevu nanna maargagalannu kaikollade, nanna nyaaya pramaanada vishayavaagi mukhadaakshinya torisida prakaarave naanu nimmannu janarellara munde asadde maadalpatta varannaagiyoo neecharannaagiyoo maadiddene.
Malachi 2:9 in English
- King James Version (KJV)
- Therefore have I also made you contemptible and base before all the people, according as ye have not kept my ways, but have been partial in the law.
- World English Bible (WEB)
- “Therefore I have also made you contemptible and wicked before all the people, according to the way you have not kept my ways, but have had respect for persons in the law.
- American Standard Version (ASV)
- Therefore have I also made you contemptible and base before all the people, according as ye have not kept my ways, but have had respect of persons in the law.
- Bible in Basic English (BBE)
- And so I have taken away your honour and made you low before all the people, even as you have not kept my ways, and have given no thought to me in using the law.
- Darby Translation (DBY)
- And I also have made you contemptible and base before all the people, because ye have not kept my ways, but have respect of persons in [administering] the law.
- Webster's Bible (WBS)
- Therefore have I also made you contemptible and base before all the people, according as ye have not kept my ways, but have been partial in the law.
- Young's Literal Translation (YLT)
- And I also, I have made you despised and low before all the people, Because ye are not keeping My ways, And are accepting persons in the law.
Read in context
- 7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- 8ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
- 9ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
- 10ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?
- 11ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.
Cross references
- Deuteronomy 1:17 ಧರ್ಮೋಪದೇಶಕಾಂಡ 1:17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- 1 Samuel 2:30 1 ಸಮುವೇಲನು 2:30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- Luke 11:42 ಲೂಕನು 11:42ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
- Ezekiel 13:12–16 ಯೆಹೆಜ್ಕೇಲನು 13:12–16ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ? ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು; ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು. ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
- Matthew 19:17–18 ಮತ್ತಾಯನು 19:17–18ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು. ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.
- Mark 7:8–14 ಮಾರ್ಕನು 7:8–14ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು. ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ. ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ. ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ; ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು. ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;
- Matthew 5:33–37 ಮತ್ತಾಯನು 5:33–37ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು. ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ. ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ಯಾಕಂದರೆ ನೀನು ಒಂದು ಕೂದಲನ್ನಾದರೂ ಬಿಳಿ ಅಥವಾ ಕಪ್ಪು ಮಾಡಲಾರಿ. ಆದರೆ ನಿನ್ನ ಮಾತು ಹೌದಾಗಿದ್ದರೆ ಹೌದು, ಅಲ್ಲವಾಗಿದ್ದರೆ ಅಲ್ಲ ಎಂದಿರಲಿ; ಇವುಗಳಿಗಿಂತ ಹೆಚ್ಚಾದದ್ದು ಕೆಟ್ಟದ್ದ ರಿಂದ ಬರುವಂಥದ್ದು.
- Matthew 5:43–44 ಮತ್ತಾಯನು 5:43–44ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- 1 Kings 22:28 1 ಅರಸುಗಳು 22:28ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
- Ezekiel 13:21 ಯೆಹೆಜ್ಕೇಲನು 13:21ನಿಮ್ಮ ವಸ್ತ್ರಗಳನ್ನು ಹರಿದು ಬಿಟ್ಟು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕು ವದಿಲ್ಲ. ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- Malachi 2:8 ಮಲಾಕಿಯ 2:8ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
- Micah 3:6–7 ಮೀಕ 3:6–7ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು. ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.