Malachi · chapter 3 · verse 10
Malachi 3:10 in Kannada
ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Nanna aalayadalli aahaaraviruva haage hattane paalu galannellaa bokkasada maneyalli tanniri; idarinda nannannu pareekshisiri; naanu nimage aakaashada kitaki galannu teredu saakaaguvashtakkinta hechchaaguvashtu aasheervaada nimage surisadiruvene? Endu sainyagala kartanu heluttaane.
Malachi 3:10 in English
- King James Version (KJV)
- Bring ye all the tithes into the storehouse, that there may be meat in mine house, and prove me now herewith, saith the LORD of hosts, if I will not open you the windows of heaven, and pour you out a blessing, that [there shall] not [be room] enough [to receive it].
- World English Bible (WEB)
- Bring the whole tithe into the storehouse, that there may be food in my house, and test me now in this,” says the LORD of Armies, “if I will not open you the windows of heaven, and pour you out a blessing, that there will not be enough room for.
- American Standard Version (ASV)
- Bring ye the whole tithe into the store-house, that there may be food in my house, and prove me now herewith, saith Jehovah of hosts, if I will not open you the windows of heaven, and pour you out a blessing, that there shall not be room enough [to receive it].
- Bible in Basic English (BBE)
- Let your tenths come into the store-house so that there may be food in my house, and put me to the test by doing so, says the Lord of armies, and see if I do not make the windows of heaven open and send down such a blessing on you that there is no room for it.
- Darby Translation (DBY)
- Bring the whole tithe into the treasure-house, that there may be food in my house, and prove me now herewith, saith Jehovah of hosts, if I open not to you the windows of the heavens, and pour you out a blessing, till there be no place for it.
- Webster's Bible (WBS)
- Bring ye all the tithes into the store-house, that there may be food in my house, and prove me now with this, saith the LORD of hosts, if I will not open you the windows of heaven, and pour you out a blessing, that [there shall] not [be room] enough [to receive it] .
- Young's Literal Translation (YLT)
- Bring in all the tithe unto the treasure-house, And there is food in My house; When ye have tried Me, now, with this, Said Jehovah of Hosts, Do not I open to you the windows of heaven? Yea, I have emptied on you a blessing till there is no space.
Read in context
- 8ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
- 9ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ.
- 10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 11ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 12ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು; ಯಾಕಂದರೆ ನೀವು ರಮ್ಯವಾದ ದೇಶವಾಗುವಿರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Cross references
- 2 Corinthians 9:6–8 2 ಕೊರಿಂಥದವರಿಗೆ 9:6–8ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Proverbs 3:9–10 ಜ್ಞಾನೋಕ್ತಿಗಳು 3:9–10ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- Deuteronomy 28:12 ಧರ್ಮೋಪದೇಶಕಾಂಡ 28:12ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
- Leviticus 27:30 ಯಾಜಕಕಾಂಡ 27:30ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.
- Nehemiah 13:10–13 ನೆಹೆಮೀಯ 13:10–13ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು. ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು. ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು. ಆಗ ನಾನು ಯಾಜಕನಾದ ಶೆಲೆಮ್ಯನನ್ನೂ ಶಾಸ್ತ್ರಿಯಾದ ಚಾದೋಕನನ್ನೂ ಲೇವಿ ಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗನಾದ ಹಾನಾ ನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು; ಅವರು ನಂಬಿಗಸ್ತರೆಂದು ಎಣಿಸಲ್ಪಟ್ಟಿದ್ದರು. ತಮ್ಮ ಸಹೋ ದರರಿಗೆ ವಿಭಾಗಿಸುವದು ಅವರ ಕೆಲಸವಾಗಿತ್ತು.
- Nehemiah 12:44 ನೆಹೆಮೀಯ 12:44ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
- 2 Chronicles 31:4–19 2 ಪೂರ್ವಕಾಲವೃತ್ತಾಂತ 31:4–19ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು. ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು; ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲ್ ಯೆಹೂದ ಮಕ್ಕಳು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಕರ್ತನಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶ ಮಾಂಶದ ಪಾಲು ತಂದು ರಾಶಿರಾಶಿಯಾಗಿ ಇಟ್ಟರು. ಮೂರನೇ ತಿಂಗಳಲ್ಲಿ ರಾಶಿಗಳ ತಳಹದಿ ಆರಂಭಿಸಿ ಏಳನೇ ತಿಂಗಳಲ್ಲಿ ತೀರಿಸಿದರು. ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ ಅವರು ಕರ್ತನನ್ನೂ ಆತನ ಜನವಾದ ಇಸ್ರಾಯೇ ಲನ್ನೂ ಸ್ತುತಿಸಿದರು. ಆಗ ಹಿಜ್ಕೀಯನು ರಾಶಿಗಳನ್ನು ಕುರಿತು ಯಾಜಕರನ್ನೂ ಲೇವಿಯರನ್ನೂ ವಿಚಾರಿಸಿದನು. ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು. ಆಗ ಹಿಜ್ಕೀಯನು ಕರ್ತನ ಮನೆಯಲ್ಲಿ ಉಗ್ರಾಣಗಳನ್ನು ಸಿದ್ಧಮಾಡಲು ಹೇಳಿದನು. ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು. ಇದಲ್ಲದೆ ಅರಸನಾದ ಹಿಜ್ಕೀಯನ ಅಪ್ಪಣೆ ಯಿಂದಲೂ ದೇವರ ಆಲಯದ ಅಧಿಕಾರಿಯಾದ ಅಜರ್ಯನ ಅಪ್ಪಣೆಯಿಂದಲೂ ಯೆಹೀಯೇಲನೂ ಅಜಜ್ಯನೂ ನಹತನೂ ಅಸಾಹೇಲನೂ ಯೆರೀಮೋ ತನೂ, ಯೋಜಾಬಾದನೂ, ಎಲೀಯೇಲನೂ, ಇಸ್ಮ ಕ್ಯನೂ ಮಹತನೂ ಬೆನಾಯನೂ ಇವರು ಕೋನನ್ಯನ ಅವನ ಸಹೋದರನಾದ ಶಿಮ್ಮಿಯ ಕೈಕೆಳಗೆ ವಿಚಾರಣಾ ಕರ್ತರಾಗಿದ್ದರು. ಇದಲ್ಲದೆ ಲೇವಿಯನಾಗಿರುವ ಇಮ್ನನ ಮಗನಾದ ಕೋರೆ ಎಂಬವನು ಪೂರ್ವದಿಕ್ಕಿ ನಲ್ಲಿರುವ ದ್ವಾರಪಾಲಕನು ಕರ್ತನ ಕಾಣಿಕೆಗಳನ್ನೂ ಮಹಾ ಪರಿಶುದ್ಧವಾದವುಗಳನ್ನೂ ಪಾಲು ಹಂಚುವ ದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಅರ್ಪಣೆ ಗಳ ಮೇಲೆ ಇದ್ದನು. ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ಸರತಿ ಸರತಿಯಾಗಿ ಹಿರಿಯರಿಗೂ ಕಿರಿಯರಿಗೂ ಪಾಲು ಹಂಚುವದಕ್ಕೆ ಎದೆನನೂ ವಿಾನ್ಯವಿಾನನೂ ಯೇಷೂವನೂ ಶೆಮಾ ಯನೂ ಅಮರ್ಯನೂ ಶೆಕನ್ಯನೂ ಇದ್ದರು. ಲೆಕ್ಕ ದಲ್ಲಿ ಬರೆಯಲ್ಪಟ್ಟ ಮೂರು ವರುಷ ಪ್ರಾಯ ಮೊದಲು ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಕರ್ತನ ಮನೆಯಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವದಕ್ಕೂ ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ ಅವರ ಸಮಸ್ತ ಕೂಟದಲ್ಲಿ ಲೆಕ್ಕದೊಳಗೆ ಬರೆ ಯಲ್ಪಟ್ಟ ಅವರ ಚಿಕ್ಕವರಿಗೂ ಹೆಂಡತಿಯರಿಗೂ ಕುಮಾರರಿಗೂ ಕುಮಾರ್ತೆಯರಿಗೂ ಕೊಡುವದಕ್ಕೆ ಇದ್ದರು. ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನು ಪರಿಶುದ್ಧತೆಯಲ್ಲಿ ಪರಿಶುದ್ಧ ಮಾಡಿಕೊಂಡರು. ಇದ ಲ್ಲದೆ ಯಾಜಕರಲ್ಲಿರುವ ಸಮಸ್ತ ಗಂಡಸರಿಗೂ ಲೇವಿ ಯರಲ್ಲಿ ಬರೆಯಲ್ಪಟ್ಟಿದ್ದ ಸಮಸ್ತರಿಗೂ ಪಾಲನ್ನು ಕೊಡುವದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ಮಕ್ಕಳಲ್ಲಿ ಹೆಸರಿನಿಂದ ಬರೆಯಲ್ಪಟ್ಟ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.
- Numbers 18:21 ಅರಣ್ಯಕಾಂಡ 18:21ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.
- Leviticus 26:10 ಯಾಜಕಕಾಂಡ 26:10ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.
- Luke 12:16–17 ಲೂಕನು 12:16–17ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು. ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು--
Original words (Hebrew)
- Bring · H935בּוֹא bôwʼ
- tithes · H4643מַעֲשֵׂר maʻăsêr
- storehouse · H214אוֹצָר ʼôwtsâr
- meat · H2964טֶרֶף ṭereph
- house · H1004בַּיִת bayith
- prove · H974בָּחַן bâchan
- herewith · H2063זֹאת zôʼth
- saith · H559אָמַר ʼâmar
- hosts · H6635צָבָא tsâbâʼ
- open · H6605פָּתַח pâthach
- windows · H699אֲרֻבָּה ʼărubbâh
- heaven · H8064שָׁמַיִם shâmayim
- out · H7324רוּק rûwq
- blessing · H1293בְּרָכָה Bᵉrâkâh
- enough · H1767דַּי day