Malachi · chapter 3 · verse 17
Malachi 3:17 in Kannada
ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
Naanu nanna aabharanagalannu koodisikolluva aa dinadalli avaru nannavaraagiruvarendoo obbanu tanage seve maaduva tanna maganannu kanikarisuva prakaara avarannu kanikarisuvenendoo sainyagala kartanu heluttaane.aaga neevu tilukondu neetivanta nigoo dushtanigoo devara sevemaaduvavanigoo maadadavanigoo iruva hechchukadimeyannu tilukolluviri.
Malachi 3:17 in English
- King James Version (KJV)
- And they shall be mine, saith the LORD of hosts, in that day when I make up my jewels; and I will spare them, as a man spareth his own son that serveth him.
- World English Bible (WEB)
- They shall be mine,” says the LORD of Armies, “my own possession in the day that I make. I will spare them, as a man spares his own son who serves him.
- American Standard Version (ASV)
- And they shall be mine, saith Jehovah of hosts, [even] mine own possession, in the day that I make; and I will spare them, as a man spareth his own son that serveth him.
- Bible in Basic English (BBE)
- And they will be mine, says the Lord, in the day when I make them my special property; and I will have mercy on them as a man has mercy on his son who is his servant.
- Darby Translation (DBY)
- And they shall be unto me a peculiar treasure, saith Jehovah of hosts, in the day that I prepare; and I will spare them as a man spareth his own son that serveth him.
- Webster's Bible (WBS)
- And they shall be mine, saith the LORD of hosts, in that day when I make up my jewels; and I will spare them, as a man spareth his own son that serveth him.
- Young's Literal Translation (YLT)
- And they have been to Me, said Jehovah of Hosts, In the day that I am appointing — a peculiar treasure, And I have had pity on them, As one hath pity on his son who is serving him.
Read in context
- 15ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
- 16ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
- 17ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- 18ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
Cross references
- Exodus 19:5 ವಿಮೋಚನಕಾಂಡ 19:5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
- Deuteronomy 7:6 ಧರ್ಮೋಪದೇಶಕಾಂಡ 7:6ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
- 2 Corinthians 6:18 2 ಕೊರಿಂಥದವರಿಗೆ 6:18ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Isaiah 62:3–4 ಯೆಶಾಯ 62:3–4ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ. ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
- Jeremiah 32:38–39 ಯೆರೆಮೀಯ 32:38–39ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು. ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Romans 8:32 ರೋಮಾಪುರದವರಿಗೆ 8:32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- Deuteronomy 26:17–18 ಧರ್ಮೋಪದೇಶಕಾಂಡ 26:17–18ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ. ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
- Jeremiah 31:33 ಯೆರೆಮೀಯ 31:33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Deuteronomy 14:2 ಧರ್ಮೋಪದೇಶಕಾಂಡ 14:2ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.
- Malachi 1:6 ಮಲಾಕಿಯ 1:6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
- Ezekiel 36:27–28 ಯೆಹೆಜ್ಕೇಲನು 36:27–28ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ. ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.