Malachi · chapter 3 · verse 4
Malachi 3:4 in Kannada
ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು.
Aaga avaru kartanige neetiyalli kaanikeyannu arpisuvadakkaagiye shuddha maaduvanu. Yehoodada mattu yeroosalemina kaanikeyu kartanige poorvada divasagalalliyoo munchina varushagalalliyoo aada haage mechchikeyaa giruvadu.
Malachi 3:4 in English
- King James Version (KJV)
- Then shall the offering of Judah and Jerusalem be pleasant unto the LORD, as in the days of old, and as in former years.
- World English Bible (WEB)
- Then the offering of Judah and Jerusalem will be pleasant to the LORD as in the days of old and as in ancient years.
- American Standard Version (ASV)
- Then shall the offering of Judah and Jerusalem be pleasant unto Jehovah, as in the days of old, and as in ancient years.
- Bible in Basic English (BBE)
- Then the offering of Judah and Jerusalem will be pleasing to the Lord, as in days gone by, and as in past years.
- Darby Translation (DBY)
- Then shall the oblation of Judah and Jerusalem be pleasant unto Jehovah, as in the days of old, and as in former years.
- Webster's Bible (WBS)
- Then shall the offering of Judah and Jerusalem be pleasant to the LORD, as in the days of old, and as in former years.
- Young's Literal Translation (YLT)
- And sweet to Jehovah hath been the present of Judah and Jerusalem, As in days of old, and as in former years.
Read in context
- 2ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
- 3ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
- 4ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು.
- 5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 6ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ.
Cross references
- 2 Chronicles 7:1–3 2 ಪೂರ್ವಕಾಲವೃತ್ತಾಂತ 7:1–3ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು. ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು. ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
- Isaiah 56:7 ಯೆಶಾಯ 56:7ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
- Zechariah 8:3 ಜೆಕರ್ಯ 8:3ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
- Ezekiel 20:40–41 ಯೆಹೆಜ್ಕೇಲನು 20:40–41ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು. ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
- Ezekiel 43:26–27 ಯೆಹೆಜ್ಕೇಲನು 43:26–27ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 30:18–20 ಯೆರೆಮೀಯ 30:18–20ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು. ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು. ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು.
- Jeremiah 2:2–3 ಯೆರೆಮೀಯ 2:2–3ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ. ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.
- 2 Chronicles 7:10–12 2 ಪೂರ್ವಕಾಲವೃತ್ತಾಂತ 7:10–12ಏಳನೇ ತಿಂಗಳಿನ ಇಪ್ಪತ್ತ ಮೂರನೇ ದಿವಸದಲ್ಲಿ ಅವನು ಜನರನ್ನು ತಮ್ಮ ಡೇರೆ ಗಳಿಗೆ ಕಳುಹಿಸಿಬಿಟ್ಟನು. ಕರ್ತನು ದಾವೀದನಿಗೂ ಸೊಲೊಮೋನನಿಗೂ ತನ್ನ ಜನವಾದ ಇಸ್ರಾಯೇ ಲಿಗೂ ಮಾಡಿದ ಉಪಕಾರಕ್ಕೋಸ್ಕರ ಅವರು ಹೃದಯ ದಲ್ಲಿ ಆನಂದವಾಗಿ ಸಂತೋಷಪಡುತ್ತಾ ಹೋದರು. ಹೀಗೆಯೇ ಸೊಲೊಮೋನನು ಕರ್ತನ ಆಲಯ ವನ್ನೂ ಅರಸನ ಮನೆಯನ್ನೂ ಕಟ್ಟಿಸಿ ಮುಗಿಸಿದನು. ಕರ್ತನ ಆಲಯದಲ್ಲಿಯೂ ತನ್ನ ಮನೆಯಲ್ಲಿಯೂ ಮಾಡಲು ಸೊಲೊಮೋನನ ಹೃದಯದಲ್ಲಿ ಬಂದ ದ್ದನ್ನೆಲ್ಲಾ ಅವನು ಸಫಲವಾಗುವಂತೆ ಸಾಧಿಸಿದನು. ಕರ್ತನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿ ಕೊಂಡು ಅವನಿಗೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆದುಕೊಂಡಿದ್ದೇನೆ.
- 2 Chronicles 30:21–27 2 ಪೂರ್ವಕಾಲವೃತ್ತಾಂತ 30:21–27ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು. ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು. ಆದರೆ ಸಮೂಹವೆಲ್ಲಾ ಮತ್ತೂ ಏಳು ದಿವಸ ಆಚರಿಸುವದಕ್ಕೆ ಯೋಚಿಸಿಕೊಂಡ ಮೇಲೆ ಏಳು ದಿವಸಗಳು ಸಂತೋಷವಾಗಿ ಆಚರಿಸಿದರು. ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು. ಯೆಹೂದದ ಸಭೆಯವರೆ ಲ್ಲರೂ ಯಾಜಕರೂ ಲೇವಿಯರೂ ಇಸ್ರಾಯೇಲಿನಿಂದ ಬಂದ ಸಮಸ್ತ ಸಭೆಯೂ ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು. ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನ ಕಾಲ ಮೊದಲುಗೊಂಡು ಯೆರೂ ಸಲೇಮಿನಲ್ಲಿ ಇದರ ಹಾಗೆ ನಡೆದಿರಲಿಲ್ಲವಾದದ ರಿಂದ ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು.ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು. ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
- 2 Chronicles 31:20–21 2 ಪೂರ್ವಕಾಲವೃತ್ತಾಂತ 31:20–21ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು. ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
- 1 Chronicles 15:26 1 ಪೂರ್ವಕಾಲವೃತ್ತಾಂತ 15:26ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.
- 1 Chronicles 16:1–3 1 ಪೂರ್ವಕಾಲವೃತ್ತಾಂತ 16:1–3ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು. ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು.