Malachi · chapter 4 · verse 3
Malachi 4:3 in Kannada
ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Dushtarannu tulidubiduviri; yaakandare naanu kaarya saadhisuva dinadalli avaru nimma paadagala kelage boodiyaagiruvarendu sainyagala kartanu heluttaane.
Malachi 4:3 in English
- King James Version (KJV)
- And ye shall tread down the wicked; for they shall be ashes under the soles of your feet in the day that I shall do [this], saith the LORD of hosts.
- World English Bible (WEB)
- You shall tread down the wicked; for they will be ashes under the soles of your feet in the day that I make,” says the LORD of Armies.
- American Standard Version (ASV)
- And ye shall tread down the wicked; for they shall be ashes under the soles of your feet in the day that I make, saith Jehovah of hosts.
- Bible in Basic English (BBE)
- And the evil-doers will be crushed under you, they will be dust under your feet, in the day when I do my work, says the Lord of armies.
- Darby Translation (DBY)
- And ye shall tread down the wicked; for they shall be ashes under the soles of your feet in the day that I prepare, saith Jehovah of hosts.
- Webster's Bible (WBS)
- And ye shall tread down the wicked; for they shall be ashes under the soles of your feet in the day that I shall do [this] , saith the LORD of hosts.
- Young's Literal Translation (YLT)
- And ye have trodden down the wicked, For they are ashes under the soles of your feet, In the day that I am appointing, Said Jehovah of Hosts.
Read in context
- 1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- 3ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 4ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
- 5ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
Cross references
- Job 40:12 ಯೋಬನು 40:12ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Zechariah 10:5 ಜೆಕರ್ಯ 10:5ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
- Micah 7:10 ಮೀಕ 7:10ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
- Micah 5:8 ಮೀಕ 5:8ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
- Malachi 3:17 ಮಲಾಕಿಯ 3:17ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Psalm 91:13 ಕೀರ್ತನೆಗಳು 91:13ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.
- Joshua 10:24–25 ಯೆಹೋಶುವ 10:24–25ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು. ಆಗ ಯೆಹೋಶುವನು ಅವರಿಗೆ--ಭಯ ಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರ್ರಿ; ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಕರ್ತನು ಹೀಗೆಯೇ ಮಾಡುವನು ಅಂದನು.
- Daniel 7:18 ದಾನಿಯೇಲನು 7:18ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
- Isaiah 25:10 ಯೆಶಾಯ 25:10ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Genesis 3:15 ಆದಿಕಾಂಡ 3:15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.