Mark · chapter 1 · verse 21
Mark 1:21 in Kannada
ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.
Aaga avaru kapernaumige hodaru; koodale aatanu sabbat dinadalli sabhaamandira dolage praveshisi bodhisidanu.
Mark 1:21 in English
- King James Version (KJV)
- And they went into Capernaum; and straightway on the sabbath day he entered into the synagogue, and taught.
- World English Bible (WEB)
- They went into Capernaum, and immediately on the Sabbath day he entered into the synagogue and taught.
- American Standard Version (ASV)
- And they go into Capernaum; and straightway on the sabbath day he entered into the synagogue and taught.
- Bible in Basic English (BBE)
- And they came to Capernaum; and on the Sabbath he went into the Synagogue and gave teaching.
- Darby Translation (DBY)
- And they go into Capernaum. And straightway on the sabbath he entered into the synagogue and taught.
- Webster's Bible (WBS)
- And they went into Capernaum; and immediately on the sabbath he entered into the synagogue and taught.
- Young's Literal Translation (YLT)
- And they go on to Capernaum, and immediately, on the sabbaths, having gone into the synagogue, he was teaching,
Read in context
- 19ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು.
- 20ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
- 21ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.
- 22ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- 23ಆಗ ಅವರ ಸಭಾಮಂದಿ ರದಲ್ಲಿ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.
Cross references
- Mark 6:2 ಮಾರ್ಕನು 6:2ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?
- Mark 1:39 ಮಾರ್ಕನು 1:39ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.
- Matthew 4:23 ಮತ್ತಾಯನು 4:23ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
- Acts 13:14–52 ಅಪೊಸ್ತಲರ ಕೃತ್ಯಗಳು 13:14–52ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು. ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು. ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ. ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು. ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು ಕಾನಾನ್ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು. ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು. ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ. ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು. ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು. ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ. ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು. ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು. ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು. ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು. ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ. ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ. ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ. ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು. ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ. ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು. ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ. ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ. ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ. ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ. ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು. ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು. ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು. ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು. ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ. ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ. ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು. ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು. ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು. ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು. ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
- Acts 17:2 ಅಪೊಸ್ತಲರ ಕೃತ್ಯಗಳು 17:2ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
- Matthew 4:13 ಮತ್ತಾಯನು 4:13ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
- Acts 18:4 ಅಪೊಸ್ತಲರ ಕೃತ್ಯಗಳು 18:4ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
- Luke 13:10 ಲೂಕನು 13:10ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.
- Luke 4:16 ಲೂಕನು 4:16ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
- Mark 10:1 ಮಾರ್ಕನು 10:1ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು; ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು.
- Luke 4:31–37 ಲೂಕನು 4:31–37ಆತನು ಗಲಿಲಾಯ ಪಟ್ಟಣವಾದ ಕಪೆ ರ್ನೌಮಿಗೆ ಬಂದು ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದನು. ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು. ಆ ಸಭಾಮಂದಿರ ದಲ್ಲಿ ಅಶುದ್ಧ ದೆವ್ವ ಆತ್ಮವಿದ್ದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾಗಿ ಕೂಗುತ್ತಾ-- ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು. ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು. ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು. ಆತನ ಕೀರ್ತಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.
- Luke 10:15 ಲೂಕನು 10:15ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.
Original words (Greek)
- And · G2532καί kaí
- went · G1531εἰσπορεύομαι eisporeúomai
- into · G1519εἰς eis
- Capernaum · G2584Καπερναούμ Kapernaoúm
- and · G2532καί kaí
- straightway · G2112εὐθέως euthéōs
- day · G4521σάββατον sábbaton
- entered · G1525εἰσέρχομαι eisérchomai
- into · G1519εἰς eis
- synagogue · G4864συναγωγή synagōgḗ
- taught · G1321διδάσκω didáskō