Mark · chapter 1 · verse 3
Mark 1:3 in Kannada
ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
Kartana maargavannu neevu siddhamaadiri; aatana haadigalannu nettagemaadiri endu adaviyalli kooguva obbana shabdavade embadu.
Mark 1:3 in English
- King James Version (KJV)
- The voice of one crying in the wilderness, Prepare ye the way of the Lord, make his paths straight.
- World English Bible (WEB)
- the voice of one crying in the wilderness, ‘Make ready the way of the Lord! Make his paths straight!’”
- American Standard Version (ASV)
- The voice of one crying in the wilderness, Make ye ready the way of the Lord, Make his paths straight;
- Bible in Basic English (BBE)
- The voice of one crying in the waste land, Make ready the way of the Lord, make his roads straight;
- Darby Translation (DBY)
- Voice of one crying in the wilderness, Prepare the way of [the] Lord, make his paths straight.
- Webster's Bible (WBS)
- The voice of one crying in the wilderness, Prepare ye the way of the Lord, make his paths straight.
- Young's Literal Translation (YLT)
- 'A voice of one calling in the wilderness, Prepare ye the way of the Lord, straight make ye his paths,' —
Read in context
- 1ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು.
- 2ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ.
- 3ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
- 4ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
- 5ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
Cross references
- Isaiah 40:3–5 ಯೆಶಾಯ 40:3–5ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ. ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು. ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
- Matthew 3:3 ಮತ್ತಾಯನು 3:3ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.
- Luke 3:4–6 ಲೂಕನು 3:4–6ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು; ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
- John 3:28–36 ಯೋಹಾನನು 3:28–36ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ. ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು. ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು. ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ. ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ. ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ. ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ. ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು. ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- John 1:15 ಯೋಹಾನನು 1:15ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
- John 1:19–34 ಯೋಹಾನನು 1:19–34ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ. ಅವನು ಒಪ್ಪಿಕೊಂಡನು. ಅಲ್ಲಗಳೆಯಲಿಲ್ಲ; ಅವನು--ನಾನು ಕ್ರಿಸ್ತನಲ್ಲ ಎಂದು ಒಪ್ಪಿಕೊಂಡನು. ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು. ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು. ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು. ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು. ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು. ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ; ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು. ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು. ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು. ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು. ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು. ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು. ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು. ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.