Mark · chapter 10 · verse 19
Mark 10:19 in Kannada
ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
Vyabhichaara maadabaaradu, kollabaaradu, kadiyabaaradu, sullusaakshi helabaaradu, mosa maadabaaradu, ninna tandeyannoo taayiyannoo sanmaanisabeku emba ee aajnyegalu ninage gottive yallaa andanu.
Mark 10:19 in English
- King James Version (KJV)
- Thou knowest the commandments, Do not commit adultery, Do not kill, Do not steal, Do not bear false witness, Defraud not, Honour thy father and mother.
- World English Bible (WEB)
- You know the commandments: ‘Do not murder,’ ‘Do not commit adultery,’ ‘Do not steal,’ ‘Do not give false testimony,’ ‘Do not defraud,’ ‘Honor your father and mother.’”
- American Standard Version (ASV)
- Thou knowest the commandments, Do not kill, Do not commit adultery, Do not steal, Do not bear false witness, Do not defraud, Honor thy father and mother.
- Bible in Basic English (BBE)
- You have knowledge of what is said in the law, Do not put any one to death, Do not be untrue in married life, Do not take what is not yours, Do not give false witness, Do not get money by deceit, Give honour to your father and mother.
- Darby Translation (DBY)
- Thou knowest the commandments: Do not commit adultery, Do not kill, Do not steal, Do not bear false witness, Do not defraud, Honour thy father and mother.
- Webster's Bible (WBS)
- Thou knowest the commandments, Do not commit adultery, Do not kill, Do not steal, Do not bear false witness, Defraud not, Honor thy father and mother.
- Young's Literal Translation (YLT)
- the commands thou hast known: Thou mayest not commit adultery, Thou mayest do no murder, Thou mayest not steal, Thou mayest not bear false witness, Thou mayest not defraud, Honour thy father and mother.'
Read in context
- 17ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.
- 18ಯೇಸು ಅವನಿಗೆ --ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ.
- 19ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
- 20ಆಗ ಅವನು ಪ್ರತ್ಯುತ್ತರವಾಗಿ ಆತನಿಗೆ--ಬೋಧಕನೇ, ನಾನು ಇವೆಲ್ಲವುಗಳನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ ಅಂದನು.
- 21ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ
Cross references
- Exodus 20:12–17 ವಿಮೋಚನಕಾಂಡ 20:12–17ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು. ಕೊಲೆ ಮಾಡಬಾರದು. ವ್ಯಭಿಚಾರ ಮಾಡಬಾರದು. ಕದಿಯಬಾರದು. ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು. ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
- Romans 13:9 ರೋಮಾಪುರದವರಿಗೆ 13:9ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
- James 2:11 ಯಾಕೋಬನು 2:11ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
- Luke 18:20 ಲೂಕನು 18:20ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
- Matthew 19:17–19 ಮತ್ತಾಯನು 19:17–19ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು. ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು. ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.
- 1 Corinthians 6:7–9 1 ಕೊರಿಂಥದವರಿಗೆ 6:7–9ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು? ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ. ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
- Isaiah 8:20 ಯೆಶಾಯ 8:20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
- Matthew 5:17–20 ಮತ್ತಾಯನು 5:17–20ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು. ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು. ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
- Deuteronomy 5:16–24 ಧರ್ಮೋಪದೇಶಕಾಂಡ 5:16–24ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು. ಕೊಲ್ಲಬೇಡ ವ್ಯಭಿಚಾರ ಮಾಡಬೇಡ. ಕದಿಯಬೇಡ. ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು. ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು. (ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ) ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.
- Galatians 5:14 ಗಲಾತ್ಯದವರಿಗೆ 5:14ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
- Mark 12:28–34 ಮಾರ್ಕನು 12:28–34ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ. ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ. ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು. ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ. ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು. ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
- 1 Thessalonians 4:6 1 ಥೆಸಲೊನೀಕದವರಿಗೆ 4:6ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.