Mark · chapter 10 · verse 24
Mark 10:24 in Kannada
ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.
Aaga shishyaru aatana maatugalige beragaadaru; aadare yesu tirigi uttarakottu avarige-- makkaliraa, aishvaryadalli nambike ittavaru devara raajyadalli praveshisuvadu eshto kashta.
Mark 10:24 in English
- King James Version (KJV)
- And the disciples were astonished at his words. But Jesus answereth again, and saith unto them, Children, how hard is it for them that trust in riches to enter into the kingdom of God!
- World English Bible (WEB)
- The disciples were amazed at his words. But Jesus answered again, “Children, how hard it is for those who trust in riches to enter into God’s Kingdom!
- American Standard Version (ASV)
- And the disciples were amazed at his words. But Jesus answereth again, and saith unto them, Children, how hard is it for them that trust in riches to enter into the kingdom of God!
- Bible in Basic English (BBE)
- And the disciples were full of wonder at his words. But Jesus said to them again, Children, how hard it is for those who put faith in wealth to come into the kingdom of God!
- Darby Translation (DBY)
- And the disciples were amazed at his words. And Jesus again answering says to them, Children, how difficult it is that those who trust in riches should enter into the kingdom of God!
- Webster's Bible (WBS)
- And the disciples were astonished at his words. But Jesus answereth again, and saith to them, Children, how hard is it for them that trust in riches to enter into the kingdom of God!
- Young's Literal Translation (YLT)
- And the disciples were astonished at his words, and Jesus again answering saith to them, 'Children, how hard is it to those trusting on the riches to enter into the reign of God!
Read in context
- 22ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು; ಯಾಕಂದರೆ ಅವನಿಗೆ ಬಹಳ ಆಸ್ತಿಯಿತ್ತು.
- 23ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು.
- 24ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.
- 25ಒಬ್ಬ ಐಶ್ವರ್ಯವಂತನು ದೇವರ ರಾಜ್ಯದೊಳಗೆ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಅಂದನು.
- 26ಅದಕ್ಕೆ ಅವರು ಮಿತಿವಿಾರಿ ಆಶ್ಚರ್ಯಪಟ್ಟು ತಮ್ಮೊಳಗೆ--ಹಾಗಾದರೆ ರಕ್ಷಿಸಲ್ಪಡುವದು ಯಾರಿಗೆ ಸಾಧ್ಯ ಎಂದು ಅಂದು ಕೊಂಡರು.
Cross references
- Proverbs 11:28 ಜ್ಞಾನೋಕ್ತಿಗಳು 11:28ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.
- James 5:1–3 ಯಾಕೋಬನು 5:1–3ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
- Psalm 52:7 ಕೀರ್ತನೆಗಳು 52:7ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
- Revelation 3:17 ಪ್ರಕಟನೆ 3:17ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
- Proverbs 18:11 ಜ್ಞಾನೋಕ್ತಿಗಳು 18:11ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.
- Luke 12:16–21 ಲೂಕನು 12:16–21ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು. ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು-- ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು. ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
- Psalm 62:10 ಕೀರ್ತನೆಗಳು 62:10ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
- Luke 16:14 ಲೂಕನು 16:14ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
- Job 31:24–25 ಯೋಬನು 31:24–25ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ, ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ,
- Psalm 17:14 ಕೀರ್ತನೆಗಳು 17:14ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Ezekiel 28:4–5 ಯೆಹೆಜ್ಕೇಲನು 28:4–5ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ. ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ;