Mark · chapter 10 · verse 35
Mark 10:35 in Kannada
ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು.
Aaga jebedaayana makkalaada yaakoba yohaanaru aatana balige bandu--bodhakane, naavu apekshisuvadannu neenu namagoskara maadabekendu naavu bayasutteve andaru.
Mark 10:35 in English
- King James Version (KJV)
- And James and John, the sons of Zebedee, come unto him, saying, Master, we would that thou shouldest do for us whatsoever we shall desire.
- World English Bible (WEB)
- James and John, the sons of Zebedee, came near to him, saying, “Teacher, we want you to do for us whatever we will ask.”
- American Standard Version (ASV)
- And there come near unto him James and John, the sons of Zebedee, saying unto him, Teacher, we would that thou shouldest do for us whatsoever we shall ask of thee.
- Bible in Basic English (BBE)
- And there came to him James and John, the sons of Zebedee, saying to him, Master, will you give us whatever may be our request?
- Darby Translation (DBY)
- And there come to him James and John, the sons of Zebedee, saying [to him], Teacher, we would that whatsoever we may ask thee, thou wouldst do it for us.
- Webster's Bible (WBS)
- And James and John the sons of Zebedee come to him, saying, Master, we would that thou shouldest do for us whatever we shall desire.
- Young's Literal Translation (YLT)
- And there come near to him James and John, the sons of Zebedee, saying, 'Teacher, we wish that whatever we may ask for ourselves, thou mayest do for us;'
Read in context
- 33ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
- 34ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
- 35ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು.
- 36ಅದಕ್ಕೆ ಆತನು ಅವರಿಗೆ--ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ ಎಂದು ಕೇಳಲು
- 37ಅವರು ಆತನಿಗೆ--ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಿಸು ಅಂದರು.
Cross references
- Matthew 20:20–28 ಮತ್ತಾಯನು 20:20–28ತರುವಾಯ ಜೆಬೆದಾಯನ ಮಕ್ಕಳ ತಾಯಿಯು ತನ್ನ ಕುಮಾರರೊಂದಿಗೆ ಆತನ ಬಳಿಗೆ ಬಂದು ಆತ ನನ್ನು ಆರಾಧಿಸುತ್ತಾ ಆತನನ್ನು ಏನೋ ಬೇಡಿಕೊಳ್ಳ ಬೇಕೆಂದು ಅಪೇಕ್ಷಿಸಿದಳು. ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು. ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ ಬೇರೆ ಹತ್ತು ಮಂದಿಯು ಅದನ್ನು ಕೇಳಿ ಆ ಇಬ್ಬರು ಸಹೋದ ರರಿಗೆ ವಿರೋಧವಾಗಿ ಕೋಪಗೊಂಡರು. ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆ ಂದಿದ್ದರೆ ಅವನು ನಿಮ್ಮ ಆಳಾಗಿರಲಿ. ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- 2 Samuel 14:4–11 2 ಸಮುವೇಲನು 14:4–11ಹಾಗೆಯೇ ತೆಕೋವಿನವಳಾದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿ ನೆಲಕ್ಕೆ ಬಿದ್ದು ಭಕ್ತಿ ಗೌರವದಿಂದ ವಂದಿಸಿ--ಅರಸೇ, ಸಹಾಯಮಾಡು ಎಂದು ಕೇಳಿ ಕೊಂಡಳು. ಅರಸನು ಅವಳಿಗೆ ನಿನಗೆ ಏನಾಯಿತು ಅಂದನು. ಅದಕ್ಕವಳು--ನಾನು ನಿಶ್ಚಯವಾಗಿ ವಿಧವೆ ಯಾದ ಸ್ತ್ರೀಯು; ನನ್ನ ಗಂಡನು ಸತ್ತುಹೋಗಿದ್ದಾನೆ. ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು. ಆದದರಿಂದ ಇಗೋ, ಕುಟುಂಬದವರೆಲ್ಲರು ನಿನ್ನ ಸೇವಕಳ ಮೇಲೆ ವಿರೋಧವಾಗಿ ಎದ್ದು--ತನ್ನ ಸಹೋ ದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ನಾವು ಅವನನ್ನು ಕೊಲ್ಲುವ ಹಾಗೆಯೂ ಬಾಧ್ಯವನ್ನು ಸಹ ನಾಶಮಾಡಿಬಿಡುವ ಹಾಗೆಯೂ ಅವನನ್ನು ಒಪ್ಪಿಸಿಕೊಡು ಎಂದು ಹೇಳಿ ದರು. ಹೀಗೆಯೇ ಅವರು ನನಗೆ ಉಳಿದಿರುವ ನನ್ನ ಕೆಂಡವನ್ನು ಆರಿಸಿ ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಉಳಿಯ ಬಿಡುವದಿಲ್ಲ ಅಂದಳು. ಆಗ ಅರಸನು ಆ ಸ್ತ್ರೀಗೆ--ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ ಅಂದನು. ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು. ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು. ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
- 1 Kings 2:20 1 ಅರಸುಗಳು 2:20ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು. ಅವಳು ಅವನಿಗೆ--ನಿನ್ನಿಂದ ಒಂದು ಚಿಕ್ಕ ಮನವಿ ಕೇಳುತ್ತೇನೆ; ಆಗುವದಿಲ್ಲವೆಂದು ಹೇಳಬೇಡ ಅಂದಳು. ಅರಸನು ಅವಳಿಗೆ--ನನ್ನ ತಾಯಿಯೇ, ಕೇಳು; ನಾನು ನಿನ್ನ ಮಾತಿಗೆ ಆಗುವದಿಲ್ಲವೆಂದು ಹೇಳುವದಿಲ್ಲ ಅಂದನು.
- Mark 14:33 ಮಾರ್ಕನು 14:33ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
- 1 Kings 2:16 1 ಅರಸುಗಳು 2:16ಆದರೆ ರಾಜ್ಯವು ತಿರುಗಿಕೊಂಡು ನನ್ನ ಸಹೋದರನದಾ ಯಿತು; ಅದು ಅವನಿಗೆ ಕರ್ತನಿಂದ ಉಂಟಾಯಿತು. ಈಗ ನಾನು ನಿನ್ನನ್ನು ಒಂದು ಮನವಿ ಕೇಳಿಕೊಳ್ಳುತ್ತೇನೆ; ಅದನ್ನು ಅಲ್ಲಗಳೆಯಬೇಡ ಅಂದನು.
- Mark 5:37 ಮಾರ್ಕನು 5:37ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
- Mark 1:19–20 ಮಾರ್ಕನು 1:19–20ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು. ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
- Mark 9:2 ಮಾರ್ಕನು 9:2ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
Original words (Greek)
- And · G2532καί kaí
- James · G2385Ἰάκωβος Iákōbos
- and · G2532καί kaí
- John · G2491Ἰωάννης Iōánnēs
- sons · G5207υἱός huiós
- Zebedee · G2199Ζεβεδαῖος Zebedaîos
- unto · G4365προσπορεύομαι prosporeúomai
- him · G846αὐτός autós
- saying · G3004λέγω légō
- Master · G1320διδάσκαλος didáskalos
- would · G2309θέλω thélō
- that · G2443ἵνα hína
- do · G4160ποιέω poiéō
- us · G2254ἡμῖν hēmîn
- whatsoever · G3739ὅς hós
- desire · G154αἰτέω aitéō