Mark · chapter 10 · verse 4
Mark 10:4 in Kannada
ಅದಕ್ಕೆ ಅವರು--ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.
Adakke avaru--tyaagapatravannu baredukottu aakeyannu bittubidabekendu mosheyu appanekottanu andaru.
Mark 10:4 in English
- King James Version (KJV)
- And they said, Moses suffered to write a bill of divorcement, and to put her away.
- World English Bible (WEB)
- They said, “Moses allowed a certificate of divorce to be written, and to divorce her.”
- American Standard Version (ASV)
- And they said, Moses suffered to write a bill of divorcement, and to put her away.
- Bible in Basic English (BBE)
- And they said to him, Moses let us give her a statement in writing, and be free from her.
- Darby Translation (DBY)
- And they said, Moses allowed to write a bill of divorce, and to put away.
- Webster's Bible (WBS)
- And they said, Moses suffered to write a bill of divorcement, and to put [her] away.
- Young's Literal Translation (YLT)
- and they said, 'Moses suffered to write a bill of divorce, and to put away.'
Read in context
- 2ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು.
- 3ಆತನು ಪ್ರತ್ಯುತ್ತರವಾಗಿ ಅವರಿಗೆ--ಮೋಶೆಯು ನಿಮಗೆ ಏನು ಅಪ್ಪಣೆ ಕೊಟ್ಟನು ಎಂದು ಕೇಳಿದನು.
- 4ಅದಕ್ಕೆ ಅವರು--ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.
- 5ಯೇಸು ಪ್ರತ್ಯುತ್ತರವಾಗಿ ಅವರಿಗೆ--ಅವನು ನಿಮ್ಮ ಹೃದಯದ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು.
- 6ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು.
Cross references
- Deuteronomy 24:1–4 ಧರ್ಮೋಪದೇಶಕಾಂಡ 24:1–4ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು. ಅವಳು ಅವನ ಮನೆಯನ್ನು ಬಿಟ್ಟು ಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗ ಬಹುದು. ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.
- Matthew 5:31–32 ಮತ್ತಾಯನು 5:31–32ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ; ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
- Matthew 19:7 ಮತ್ತಾಯನು 19:7ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.
- Jeremiah 3:1 ಯೆರೆಮೀಯ 3:1ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
- Matthew 1:19 ಮತ್ತಾಯನು 1:19ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
- Isaiah 50:1 ಯೆಶಾಯ 50:1ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.