Mark · chapter 10 · verse 43
Mark 10:43 in Kannada
ಆದರೆ ನಿಮ್ಮೊಳಗೆ ಹಾಗಿರಬಾರದು; ಮತ್ತು ನಿಮ್ಮೊಳಗೆ ದೊಡ್ಡವನಾಗಿರ ಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು.
Aadare nimmolage haagirabaaradu; mattu nimmolage doddavanaagira bekendiruvavanu nimma sevakanaagirabeku.
Mark 10:43 in English
- King James Version (KJV)
- But so shall it not be among you: but whosoever will be great among you, shall be your minister:
- World English Bible (WEB)
- But it shall not be so among you, but whoever wants to become great among you shall be your servant.
- American Standard Version (ASV)
- But it is not so among you: but whosoever would become great among you, shall be your minister;
- Bible in Basic English (BBE)
- But it is not so among you: but whoever has a desire to become great among you, let him be your servant:
- Darby Translation (DBY)
- but it is not thus among you; but whosoever would be great among you, shall be your minister;
- Webster's Bible (WBS)
- But so it shall not be among you: but whoever will be great among you, shall be your minister:
- Young's Literal Translation (YLT)
- but not so shall it be among you; but whoever may will to become great among you, he shall be your minister,
Read in context
- 41ಆ ಹತ್ತು ಮಂದಿಯು ಅದನ್ನು ಕೇಳಿದಾಗ ಯಾಕೋಬ ಯೋಹಾನರ ಮೇಲೆ ಅವರು ಬಹಳವಾಗಿ ಕೋಪಗೊಳ್ಳಲಾರಂಭಿಸಿದರು.
- 42ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.
- 43ಆದರೆ ನಿಮ್ಮೊಳಗೆ ಹಾಗಿರಬಾರದು; ಮತ್ತು ನಿಮ್ಮೊಳಗೆ ದೊಡ್ಡವನಾಗಿರ ಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು.
- 44ನಿಮ್ಮಲ್ಲಿ ಮುಖ್ಯಸ್ಥನಾಗಬೇಕೆಂದಿರುವವನು ಎಲ್ಲರಿಗೆ ಸೇವಕನಾಗಿರಬೇಕು.
- 45ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
Cross references
- Matthew 23:8–12 ಮತ್ತಾಯನು 23:8–12ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು. ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ. ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು. ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು. ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
- Luke 14:11 ಲೂಕನು 14:11ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
- Mark 9:35 ಮಾರ್ಕನು 9:35ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು.
- Matthew 20:26–27 ಮತ್ತಾಯನು 20:26–27ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆ ಂದಿದ್ದರೆ ಅವನು ನಿಮ್ಮ ಆಳಾಗಿರಲಿ.
- Luke 9:48 ಲೂಕನು 9:48ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
- 1 Peter 5:5–6 1 ಪೇತ್ರನು 5:5–6ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ. ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
- Galatians 5:13 ಗಲಾತ್ಯದವರಿಗೆ 5:13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- Luke 18:14 ಲೂಕನು 18:14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Romans 12:2 ರೋಮಾಪುರದವರಿಗೆ 12:2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- 1 Corinthians 9:19–23 1 ಕೊರಿಂಥದವರಿಗೆ 9:19–23ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ. ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು. ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ. ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
- John 18:36 ಯೋಹಾನನು 18:36ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
- John 13:13–18 ಯೋಹಾನನು 13:13–18ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು. ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು. ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ. ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು. ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.