Mark · chapter 10 · verse 45
Mark 10:45 in Kannada
ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
Yaakandare manushyaku maaranu saha seve maadisikolluvadakkaagi alla, aadare seve maaduvadakkoo tanna praanavannu anekarigoskara eedukoduvadakkoo bandanu endu helidanu.
Mark 10:45 in English
- King James Version (KJV)
- For even the Son of man came not to be ministered unto, but to minister, and to give his life a ransom for many.
- World English Bible (WEB)
- For the Son of Man also came not to be served but to serve, and to give his life as a ransom for many.”
- American Standard Version (ASV)
- For the Son of man also came not to be ministered unto, but to minister, and to give his life a ransom for many.
- Bible in Basic English (BBE)
- For truly the Son of man did not come to have servants, but to be a servant, and to give his life for the salvation of men.
- Darby Translation (DBY)
- For also the Son of man did not come to be ministered to, but to minister, and give his life a ransom for many.
- Webster's Bible (WBS)
- For even the son of man came not to be ministered to, but to minister, and to give his life a ransom for many.
- Young's Literal Translation (YLT)
- for even the Son of Man came not to be ministered to, but to minister, and to give his life a ransom for many.'
Read in context
- 43ಆದರೆ ನಿಮ್ಮೊಳಗೆ ಹಾಗಿರಬಾರದು; ಮತ್ತು ನಿಮ್ಮೊಳಗೆ ದೊಡ್ಡವನಾಗಿರ ಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು.
- 44ನಿಮ್ಮಲ್ಲಿ ಮುಖ್ಯಸ್ಥನಾಗಬೇಕೆಂದಿರುವವನು ಎಲ್ಲರಿಗೆ ಸೇವಕನಾಗಿರಬೇಕು.
- 45ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
- 46ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.
- 47ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು.
Cross references
- Matthew 20:28 ಮತ್ತಾಯನು 20:28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- Philippians 2:5–8 ಫಿಲಿಪ್ಪಿಯವರಿಗೆ 2:5–8ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ. ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- John 13:14 ಯೋಹಾನನು 13:14ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು.
- John 10:15 ಯೋಹಾನನು 10:15ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.
- Hebrews 5:8 ಇಬ್ರಿಯರಿಗೆ 5:8ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
- Luke 22:26–27 ಲೂಕನು 22:26–27ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ. ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
- Isaiah 53:10–12 ಯೆಶಾಯ 53:10–12ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- 1 Peter 1:19 1 ಪೇತ್ರನು 1:19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Daniel 9:26 ದಾನಿಯೇಲನು 9:26ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.