Mark · chapter 10 · verse 48
Mark 10:48 in Kannada
ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.
Avanu summaniruvante anekaru avanige khanditavaagi helidaru; aadare avanu innoo hechchaagi--daaveedanakumaarane, nannannu karunisu endu koogidanu.
Mark 10:48 in English
- King James Version (KJV)
- And many charged him that he should hold his peace: but he cried the more a great deal, [Thou] Son of David, have mercy on me.
- World English Bible (WEB)
- Many rebuked him, that he should be quiet, but he cried out much more, “You son of David, have mercy on me!”
- American Standard Version (ASV)
- And many rebuked him, that he should hold his peace: but he cried out the more a great deal, Thou son of David, have mercy on me.
- Bible in Basic English (BBE)
- And some of them, turning in protest, gave him an order to be quiet: but he went on crying out all the more, Son of David, have mercy on me.
- Darby Translation (DBY)
- And many rebuked him, that he might be silent; but he cried so much the more, Son of David, have mercy on me.
- Webster's Bible (WBS)
- And many charged him that he should hold his peace: but he cried the more a great deal, [Thou] son of David, have mercy on me.
- Young's Literal Translation (YLT)
- and many were rebuking him, that he might keep silent, but the more abundantly he cried out, 'Son of David, deal kindly with me.'
Read in context
- 46ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.
- 47ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು.
- 48ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.
- 49ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.
- 50ಅವನು ತನ್ನ ಉಡುಪನ್ನು ತೆಗೆದುಹಾಕಿ ಎದ್ದು ಯೇಸುವಿನ ಬಳಿಗೆ ಬಂದನು.
Cross references
- Jeremiah 29:13 ಯೆರೆಮೀಯ 29:13ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
- Mark 7:26–29 ಮಾರ್ಕನು 7:26–29ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು. ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು. ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು. ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.
- Genesis 32:24–28 ಆದಿಕಾಂಡ 32:24–28ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು. ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು. ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು. ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು. ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- Matthew 20:31 ಮತ್ತಾಯನು 20:31ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
- Luke 18:1–8 ಲೂಕನು 18:1–8ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು-- ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು. ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು. ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ. ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು. ಕರ್ತನು--ಈ ಅನ್ಯಾಯಗಾರನಾದ ನ್ಯಾಯಾಧಿ ಪತಿಯು ಅಂದುಕೊಂಡದ್ದನ್ನು ಕೇಳಿರಿ. ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
- Psalm 62:12 ಕೀರ್ತನೆಗಳು 62:12ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
- Mark 5:35 ಮಾರ್ಕನು 5:35ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.
- Luke 18:39 ಲೂಕನು 18:39ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
- Matthew 19:13 ಮತ್ತಾಯನು 19:13ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.
- Luke 11:5–10 ಲೂಕನು 11:5–10ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು; ನನ್ನ ಸ್ನೇಹಿ ತನು ಪ್ರಯಾಣವಾಗಿ ನನ್ನ ಬಳಿಗೆ ಬಂದಿದ್ದಾನೆ; ಅವನಿಗೆ ಬಡಿಸುವದಕ್ಕೆ ನನ್ನಲ್ಲಿ ಏನೂ ಇಲ್ಲ ಅನ್ನಲು ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು. ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು. ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು. ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Matthew 15:23–28 ಮತ್ತಾಯನು 15:23–28ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು. ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು. ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು. ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು. ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು. ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
Original words (Greek)
- And · G2532καί kaí
- many · G4183πολύς polýs
- charged · G2008ἐπιτιμάω epitimáō
- him · G846αὐτός autós
- that · G2443ἵνα hína
- peace · G4623σιωπάω siōpáō
- but · G1161δέ dé
- cried · G2896κράζω krázō
- more · G3123μᾶλλον mâllon
- deal · G4183πολύς polýs
- Son · G5207υἱός huiós
- David · G1138Δαβίδ Dabíd
- on · G1653ἐλεέω eleéō
- me · G3165μέ mé