Mark · chapter 11 · verse 1
Mark 11:1 in Kannada
ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--
Avaru yeroosalemige saviాpavaagi enneemaragala guddada kadege iruva betphagegoo bethaanyakkoo bandaaga aatanu tanna shishyaralli ibbarannu kaluhisi avarige--
Mark 11:1 in English
- King James Version (KJV)
- And when they came nigh to Jerusalem, unto Bethphage and Bethany, at the mount of Olives, he sendeth forth two of his disciples,
- World English Bible (WEB)
- When they came near to Jerusalem, to Bethsphage and Bethany, at the Mount of Olives, he sent two of his disciples
- American Standard Version (ASV)
- And when they draw nigh unto Jerusalem, unto Bethphage and Bethany, at the mount of Olives, he sendeth two of his disciples,
- Bible in Basic English (BBE)
- And when they came near to Jerusalem, to Beth-phage and Bethany, at the Mountain of Olives, he sent two of his disciples,
- Darby Translation (DBY)
- And when they draw near to Jerusalem, to Bethphage and Bethany, at the mount of Olives, he sends two of his disciples,
- Webster's Bible (WBS)
- And when they came nigh to Jerusalem, to Bethphage, and Bethany, at the mount of Olives, he sendeth forth two of his disciples,
- Young's Literal Translation (YLT)
- And when they come nigh to Jerusalem, to Bethphage, and Bethany, unto the mount of the Olives, he sendeth forth two of his disciples,
Read in context
- 1ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--
- 2ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ.
- 3ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು.
Cross references
- Matthew 21:1–11 ಮತ್ತಾಯನು 21:1–11ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ-- ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ. ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು. ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ-- ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ. ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು. ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು. ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು. ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು. ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು. ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
- John 12:14–19 ಯೋಹಾನನು 12:14–19ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು; ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು. ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು. ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು. ಆತನು ಈ ಅದ್ಭುತಕಾರ್ಯವನ್ನು ಮಾಡಿದನೆಂದು ಕೇಳಿದ ಜನರು ಸಹ ಆತನನ್ನು ಎದುರುಗೊಂಡರು. ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
- Luke 19:29–40 ಲೂಕನು 19:29–40ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ-- ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ; ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು. ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು. ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ ಅವರು--ಅದು ಕರ್ತನಿಗೆ ಬೇಕಾಗಿದೆ ಅಂದರು. ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು. ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ-- ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು. ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು. ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- Matthew 21:17 ಮತ್ತಾಯನು 21:17ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
- Matthew 24:3 ಮತ್ತಾಯನು 24:3ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
- Acts 1:12 ಅಪೊಸ್ತಲರ ಕೃತ್ಯಗಳು 1:12ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.
- Zechariah 14:4 ಜೆಕರ್ಯ 14:4ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
- John 8:1 ಯೋಹಾನನು 8:1ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋದನು.
- Mark 6:7 ಮಾರ್ಕನು 6:7ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.
- Matthew 26:30 ಮತ್ತಾಯನು 26:30ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.
- Mark 14:13 ಮಾರ್ಕನು 14:13ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ.
- Mark 13:3 ಮಾರ್ಕನು 13:3ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
Original words (Greek)
- And · G2532καί kaí
- when · G3753ὅτε hóte
- nigh · G1448ἐγγίζω engízō
- to · G1519εἰς eis
- Jerusalem · G2419Ἱερουσαλήμ Hierousalḗm
- unto · G1519εἰς eis
- Bethphage · G967Βηθφαγή Bēthphagḗ
- and · G2532καί kaí
- Bethany · G963Βηθανία Bēthanía
- at · G4314πρός prós
- mount · G3735ὄρος óros
- Olives · G1636ἐλαία elaía
- forth · G649ἀποστέλλω apostéllō
- two · G1417δύο dýo
- his · G846αὐτός autós
- disciples · G3101μαθητής mathētḗs