Mark · chapter 11 · verse 10
Mark 11:10 in Kannada
ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
Kartana hesarinalli baruva namma tande yaada daaveedana raajyavu aasheervadisalpadali; unnatadalli hosanna endu helidaru.
Mark 11:10 in English
- King James Version (KJV)
- Blessed [be] the kingdom of our father David, that cometh in the name of the Lord: Hosanna in the highest.
- World English Bible (WEB)
- Blessed is the kingdom of our father David that is coming in the name of the Lord! Hosanna in the highest!”
- American Standard Version (ASV)
- Blessed [is] the kingdom that cometh, [the kingdom] of our father David: Hosanna in the highest.
- Bible in Basic English (BBE)
- A blessing on the coming kingdom of our father David: Glory in the highest.
- Darby Translation (DBY)
- Blessed [be] the coming kingdom of our father David. Hosanna in the highest!
- Webster's Bible (WBS)
- Blessed [be] the kingdom of our Father David, that cometh in the name of the Lord: Hosanna in the highest.
- Young's Literal Translation (YLT)
- blessed is the coming reign, in the name of the Lord, of our father David; Hosanna in the highest.'
Read in context
- 8ಅನೇಕರು ತಮ್ಮ ವಸ್ತ್ರ ಗಳನ್ನು ದಾರಿಯಲ್ಲಿ ಹಾಸಿದರು; ಇತರರು ಮರಗಳಿಂದ ಕೊಂಬೆಗಳನ್ನು ಕಡಿದು ದಾರಿಯಲ್ಲಿ ಹಾಕಿದರು.
- 9ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು;
- 10ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
- 11ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.
- 12ಮರುದಿವಸ ಅವರು ಬೇಥಾನ್ಯದಿಂದ ಬರುತ್ತಿ ದ್ದಾಗ ಆತನು ಹಸಿದಿದ್ದನು;
Cross references
- Ezekiel 37:24–25 ಯೆಹೆಜ್ಕೇಲನು 37:24–25ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು. ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
- Luke 2:14 ಲೂಕನು 2:14ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
- Luke 19:38–40 ಲೂಕನು 19:38–40ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು. ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು. ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- Ezekiel 34:23–24 ಯೆಹೆಜ್ಕೇಲನು 34:23–24ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
- Amos 9:11–12 ಆಮೋಸ 9:11–12ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು. ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ.
- Luke 1:31–33 ಲೂಕನು 1:31–33ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು. ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Hosea 3:5 ಹೋಶೇಯ 3:5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Jeremiah 33:26 ಯೆರೆಮೀಯ 33:26ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Psalm 148:1 ಕೀರ್ತನೆಗಳು 148:1ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.
- Jeremiah 33:15–17 ಯೆರೆಮೀಯ 33:15–17ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು. ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು. ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
Original words (Greek)
- Blessed · G2127εὐλογέω eulogéō
- kingdom · G932βασιλεία basileía
- our · G2257ἡμῶν hēmōn
- father · G3962πατήρ patḗr
- David · G1138Δαβίδ Dabíd
- that · G3588ὁ ho
- cometh · G2064ἔρχομαι érchomai
- in · G1722ἐν en
- name · G3686ὄνομα ónoma
- Lord · G2962κύριος kýrios
- Hosanna · G5614ὡσαννά hōsanná
- in · G1722ἐν en
- highest · G5310ὕψιστος hýpsistos