Mark · chapter 11 · verse 17
Mark 11:17 in Kannada
ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
Aatanu avarige bodhisuttaa--nanna maneyu ellaa janaangagalavarinda praarthaneya mane endu kareyalpaduvadendu baredillave? Aadare neevu adannu kallara gaviyannaagi maadiddeeri endu helidanu.
Mark 11:17 in English
- King James Version (KJV)
- And he taught, saying unto them, Is it not written, My house shall be called of all nations the house of prayer? but ye have made it a den of thieves.
- World English Bible (WEB)
- He taught, saying to them, “Isn’t it written, ‘My house will be called a house of prayer for all the nations’? But you have made it a den of robbers!”
- American Standard Version (ASV)
- And he taught, and said unto them, Is it not written, My house shall be called a house of prayer for all the nations? but ye have made it a den of robbers.
- Bible in Basic English (BBE)
- And he gave them teaching, and said to them, Is it not in the Writings, My house is to be named a house of prayer for all the nations? but you have made it a hole of thieves.
- Darby Translation (DBY)
- And he taught saying to them, Is it not written, My house shall be called a house of prayer for all the nations? but ye have made it a den of robbers.
- Webster's Bible (WBS)
- And he taught, saying to them, Is it not written, My house shall be called by all nations the house of prayer? but ye have made it a den of thieves.
- Young's Literal Translation (YLT)
- and he was teaching, saying to them, 'Hath it not been written — My house a house of prayer shall be called for all the nations, and ye did make it a den of robbers?'
Read in context
- 15ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು.
- 16ಯಾವನೂ ದೇವಾಲಯದ ಮಾರ್ಗದಿಂದ ಯಾವ ಪಾತ್ರೆಯ ನ್ನಾದರೂ ತಕ್ಕೊಂಡು ಹೋಗಗೊಡಿಸಲಿಲ್ಲ.
- 17ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- 18ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.
- 19ಸಂಜೆಯಾದಾಗ ಆತನು ಪಟ್ಟಣದ ಹೊರಗೆ ಹೋದನು.
Cross references
- Isaiah 56:7 ಯೆಶಾಯ 56:7ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
- Jeremiah 7:11 ಯೆರೆಮೀಯ 7:11ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
- Luke 19:46 ಲೂಕನು 19:46ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.
- John 2:16 ಯೋಹಾನನು 2:16ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.
- 1 Kings 8:41–48 1 ಅರಸುಗಳು 8:41–48ಇದಲ್ಲದೆ ನಿನ್ನ ಜನರಾದ ಇಸ್ರಾಯೇಲಿನವ ನಲ್ಲದೆ ನಿನ್ನ ಹೆಸರಿನ ನಿಮಿತ್ತ ದೂರ ದೇಶದಿಂದ ಬಂದ ಪರದೇಶಸ್ಥನನ್ನು ಕುರಿತು ಏನಂದರೆ ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು. ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು. ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು. ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
- Isaiah 60:7 ಯೆಶಾಯ 60:7ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
- Hosea 12:7 ಹೋಶೇಯ 12:7ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.