Mark · chapter 11 · verse 24
Mark 11:24 in Kannada
ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
Aada kaarana naanu nimage heluvadenandare--neevu praarthane maaduvaaga yaavavugalannu aashisu tteero avu nimage sikkuvavendu nambiri; mattu avugalannu neevu honduviri.
Mark 11:24 in English
- King James Version (KJV)
- Therefore I say unto you, What things soever ye desire, when ye pray, believe that ye receive [them], and ye shall have [them].
- World English Bible (WEB)
- Therefore I tell you, all things whatever you pray and ask for, believe that you have received them, and you shall have them.
- American Standard Version (ASV)
- Therefore I say unto you, All things whatsoever ye pray and ask for, believe that ye receive them, and ye shall have them.
- Bible in Basic English (BBE)
- For this reason I say to you, Whatever you make a request for in prayer, have faith that it has been given to you, and you will have it.
- Darby Translation (DBY)
- For this reason I say to you, All things whatsoever ye pray for and ask, believe that ye receive it, and it shall come to pass for you.
- Webster's Bible (WBS)
- Therefore I say to you, Whatever things ye desire when ye pray, believe that ye receive [them] , and ye shall have [them] .
- Young's Literal Translation (YLT)
- Because of this I say to you, all whatever — praying — ye do ask, believe that ye receive, and it shall be to you.
Read in context
- 22ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ.
- 23ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.
- 24ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
- 25ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.
- 26ನೀವು ಕ್ಷಮಿಸದಿದ್ದರೆ ಪರ ಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಅಪರಾಧ ಗಳನ್ನು ಕ್ಷಮಿಸುವದಿಲ್ಲ.
Cross references
- Matthew 21:22 ಮತ್ತಾಯನು 21:22ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
- 1 John 5:14–15 1 ಯೋಹಾನನು 5:14–15ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
- 1 John 3:22 1 ಯೋಹಾನನು 3:22ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
- James 1:5–6 ಯಾಕೋಬನು 1:5–6ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ. ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
- John 15:7 ಯೋಹಾನನು 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
- Matthew 18:19 ಮತ್ತಾಯನು 18:19ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.
- John 14:13 ಯೋಹಾನನು 14:13ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
- Matthew 7:7–11 ಮತ್ತಾಯನು 7:7–11ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು. ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು. ಇಲ್ಲವೆ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ನಿಮ್ಮಲ್ಲಿ ಯಾವ ನಾದರೂ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ? ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
- Luke 11:9–13 ಲೂಕನು 11:9–13ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು. ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು. ನಿಮ್ಮಲ್ಲಿ ತಂದೆ ಯಾಗಿರುವ ಯಾವನಾದರೂ ತನ್ನ ಮಗನು ರೊಟ್ಟಿ ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ವಿಾನನ್ನು ಕೇಳಿದರೆ ವಿಾನಿಗೆ ಬದಲಾಗಿ ಅವನಿಗೆ ಹಾವನ್ನು ಕೊಡುವನೇ? ಇಲ್ಲವೆ ಅವನು ಮೊಟ್ಟೆ ಯನ್ನು ಕೇಳಿದರೆ ಅವನಿಗೆ ಚೇಳನ್ನು ಕೊಡುವನೇ? ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
- John 16:23–27 ಯೋಹಾನನು 16:23–27ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು. ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು. ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ. ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಬೇಡಿಕೊಳ್ಳುವಿರಿ; ನಿಮಗೋಸ್ಕರ ತಂದೆ ಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳು ವದಿಲ್ಲ. ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
- James 5:15–18 ಯಾಕೋಬನು 5:15–18ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು. ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ. ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ. ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.
- Luke 18:1–8 ಲೂಕನು 18:1–8ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು-- ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು. ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು. ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ. ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು. ಕರ್ತನು--ಈ ಅನ್ಯಾಯಗಾರನಾದ ನ್ಯಾಯಾಧಿ ಪತಿಯು ಅಂದುಕೊಂಡದ್ದನ್ನು ಕೇಳಿರಿ. ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.